ಅ*ಚಾರವೆಸಗಿದ ಆರೋಪಿಯನ್ನು ಎತ್ತಿನಗಾಡಿಗೆ ಕಟ್ಟಿ,ಬೆತ್ತಲೆ ಮೆರವಣಿಗೆ ; ಉತ್ತರ ಪ್ರದೇಶದಲ್ಲಿ ಘಟನೆ !!!

ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಅ*ಚಾರ ಆರೋಪಿಗೆ ಊರಿನವರೇ ಸೇರಿ ಬುದ್ಧಿ ಕಲಿಸಿದ್ದಾರೆ. ಅ*ಚಾರವೆಸಗಿದ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಹಲವಾರು ಪುರುಷರು ಮತ್ತು ಮಹಿಳೆಯರು ಛೀ ಮಾರಿ ಹಾಕುತ್ತಿರುವುದನ್ನು ಮತ್ತು ಇತರ ವ್ಯಕ್ತಿಗಳು ಥಳಿಸಲು ಹೇಳುತ್ತಿರುವುದನ್ನು ನಾವು ವಿಡಿಯೋದಲ್ಲಿ ನೋಡಬಹುದಾಗಿದೆ. ಇದೀಗ ಈ ವಿಡಿಯೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಉತ್ತರ ಪ್ರದೇಶದ ಬಹ್ರೈಚ್ನ ವಿಶೇಷ್ಗಂಜ್ ಪ್ರದೇಶದಲ್ಲಿ ಅ*ಚಾರ ನಡೆಸಿದ ಆರೋಪಿಯನ್ನು ಎತ್ತಿನ ಗಾಡಿಗೆ ಕಟ್ಟಿ, ಸ್ಥಳೀಯರು ಆತನ ಮೇಲೆ ಹಲ್ಲೆ ಮಾಡಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಿಡಿಯೋದಲ್ಲಿ 22 ವರ್ಷದ ಯುವಕನ ದೇಹವನ್ನು ಬೆತ್ತಲೆಯಾಗಿಸಿ, ಎತ್ತಿನ ಗಾಡಿಗೆ ಕಟ್ಟಿ ಹಾಕಲಾಗಿದೆ. ಕೆಲವರು ನಾಯಿಯನ್ನು ಅವನ ಮೇಲೆ ದಾಳಿ ಮಾಡಲು ಪ್ರಚೋದಿಸುತ್ತಿರುವುದನ್ನು ಕೂಡ ವಿಡಿಯೋದಲ್ಲಿ ನೋಡಬಹುದಾಗಿದೆ.

ಇನ್ನು ಈ ವಿಷಯಕ್ಕೆ ಕುರಿತಂತೆ, ಗುರುವಾರ ಈ ವೀಡಿಯೊ ವೈರಲ್ ಆದ ನಂತರ ಆತನ ಕುಟುಂಬವು ಸ್ಥಳೀಯ ಪೊಲೀಸರಿಗೆ ದೂರು ನೀಡಿತು. “ಮಹಿಳೆಯೊಬ್ಬರ ಲಿಖಿತ ದೂರಿನ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಹ*ಲ್ಲೆ ಮತ್ತು ಹಾನಿಗಾಗಿ ಎಫ್ಐಆರ್ ದಾಖಲಿಸಲಾಗಿದೆ” ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಪಾಂಡೆ ತಿಳಿಸಿದ್ದಾರೆ. ಇನ್ನು ಈ ಪ್ರಕರಣ ಎಲ್ಲಿಯವರೆಗೆ ಹೋಗಿ ಮುಟ್ಟುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!