ಅಮೋಘ ದಾಖಲೆ ಬರೆದ ವೈಭವ್ ಸೂರ್ಯವಂಶಿ….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಈ ಬಾರಿಯ ಐಪಿಎಲ್ನಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿದ್ದ ವೈಭವ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 33 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 57 ರನ್ ಬಾರಿಸಿದರು. ಈ ಮೂಲಕ ಈ ಬಾರಿಯ ಐಪಿಎಲ್ನಲ್ಲಿ 7 ಇನಿಂಗ್ಸ್ಗಳಿಂದ ಒಟ್ಟು 252 ರನ್ ಕಲೆಹಾಕಿದ್ದಾರೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 18 ವರ್ಷಕ್ಕಿಂತ ಮುಂಚೆ 250 ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 18 ವರ್ಷ ತುಂಬುವ ಮುನ್ನ ಐಪಿಎಲ್ನಲ್ಲಿ ಶತಕ ಹಾಗೂ ಅರ್ಧಶತಕ ಸಿಡಿಸಿದ ಏಕೈಕ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಮೂಲಕ ಚೊಚ್ಚಲ ಐಪಿಎಲ್ ಟೂರ್ನಿಯಲ್ಲೇ ವೈಭವ್ ಸೂರ್ಯವಂಶಿ ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 187 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (57) ಆಕರ್ಷಕ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು 17.1 ಓವರ್ಗಳಲ್ಲಿ 188 ರನ್ ಬಾರಿಸಿ 6 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!