ಆರೋಗ್ಯಕ್ಕೆ ಹಾನಿಕಾರಕ ಅಂಶ ಹಸಿರು ಬಟಾಣಿಯಲ್ಲೂ ಪತ್ತೆ: ಆರೋಗ್ಯ ಇಲಾಖೆ.

ಬೆಂಗಳೂರು: ಬೆಂಗಳೂರಿನ ಆಹಾರಪ್ರಿಯರಿಗೆ ಆಹಾರ ಇಲಾಖೆ ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.

ಬಟಾಣಿ ಆರೋಗ್ಯಕ್ಕೆ ಮಾರಕ ಹೇಗೆ?
ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಬಟಾಣಿಯಲ್ಲಿ ಕೃತಕ ಕಲರ್ ಬಳಕೆ ವಿಚಾರವಾಗಿ ಆಹಾರ ತಜ್ಞೆ ಡಾ. ಕೀರ್ತಿ ಹಿರಿಸಾವೆ ಮಾತನಾಡಿ, ಬಟಾಣಿಯಲ್ಲಿ ಕ್ಲೋರೋಫಿಲ್ ಅಂಶ ಇರುತ್ತೆ. ಹಸಿ ಬಟಾಣಿಗೆ ಮ್ಯಾಲಚೈಟ್ ಗ್ರೀನ್ ಬಳಕೆ ಮಾಡಲಾಗುತ್ತದೆ. ಇದು ಮನುಷ್ಯರ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಮ್ಯಾಲಚೈಟ್ ಗ್ರೀನ್ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ. ಇದು ಯೂರಿನ್ ಪ್ರೊಡಕ್ಷನ್ ಹಾಗೂ ಯೂರಿನ್ ಪ್ಯೂರಿಫೈ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಬಣ್ಣ ಹಾಕಿದ ಬಟಾಣಿ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.
ಕಾಂಗ್ರೆಸ್​ ಸರ್ಕಾರ ಬಂದ್ಮೇಲೆ Transfer ದಂ* ಜಾಸ್ತಿಯಾಗಿದೆ <

ಹೋಟೇಲ್ಗಳ ಮೇಲೆ ಆಹಾರ ಇಲಾಖೆ ದಾಳಿ
ಆಹಾರ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ವಿವಿಧ ನಗರದಲ್ಲಿನ ಹೋಟೆಲ್ಗಳಿಗೆ ಭೇಟಿ ನೀಡಿದ್ದಾರೆ. ವಲಯವಾರು ಹೋಟೆಲ್ಗಳ ಮೇಲೆ ರೇಡ್ ಮಾಡಿರುವ ಆಹಾರ ಇಲಾಖೆ ಅಧಿಕಾರಿಗಳು ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಆಗುತ್ತಿದಿಯಾ ಎಂದು ಪರಿಶೀಲನೆ ನಡೆಸಿದರು. ಪ್ಲಾಸ್ಟಿಕ್ ಬಳಸುತ್ತಿರುವ ಹೋಟೆಲ್ಗಳಿಗೆ ನೋಟಿಸ್ ಜೊತೆಗೆ ದಂಡ ಹಾಕುತ್ತಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು