ಆರ್.ಸಿ.ಬಿ ದೆ ಎಲ್ಲಾ ಕ್ಯಾಪ್; ಅಂಕಪಟ್ಟಿಯಲ್ಲಿ ಮತ್ತೆ ಟಾಪ್….

ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಈವರೆಗೆ ಆಡಿದ 10 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹಾಗೆಯೇ ಆ್ಯರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಪಟ್ಟಿಯಲ್ಲೂ ಆರ್ಸಿಬಿ ಆಟಗಾರರು ಅಗ್ರಸ್ಥಾನದಲ್ಲಿದ್ದಾರೆ. ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಿಗೆ ಆರೆಂಜ್ ಕ್ಯಾಪ್ ಪ್ರಶಸ್ತಿ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ಗೆ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅದರಂತೆ ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಆರ್ಸಿಬಿ ಆಟಗಾರರು ಮುಂಚೂಣಿಯಲ್ಲಿದ್ದಾರೆ.

ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 51 ರನ್ ಬಾರಿಸುವುದೊಂದಿಗೆ ಕೊಹ್ಲಿ ಎಲ್ಲರನ್ನು ಹಿಂದಿಕ್ಕಿದ್ದಾರೆ. ಈವರೆಗೆ 10 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 6 ಅರ್ಧಶತಕಗಳೊಂದಿಗೆ ಒಟ್ಟು 443 ರನ್ ಕಲೆಹಾಕಿದ್ದಾರೆ.ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಮುಂಬೈ ಇಂಡಿಯನ್ಸ್ ತಂಡದ ಸೂರ್ಯಕುಮಾರ್ ಯಾದವ್. ಈವರೆಗೆ 10 ಇನಿಂಗ್ಸ್ ಆಡಿರುವ ಸೂರ್ಯ 3 ಅರ್ಧಶತಕಗಳೊಂದಿಗೆ 427 ರನ್ ಕಲೆಹಾಕಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್ನಲ್ಲಿ ವಿರಾಟ್ ಕೊಹ್ಲಿಗೆ ಉತ್ತಮ ಪೈಪೋಟಿ ನೀಡುತ್ತಿದ್ದಾರೆ.

ಪರ್ಪಲ್ ಕ್ಯಾಪ್ ಪಟ್ಟಿಯಲ್ಲಿ ಆರ್ಸಿಬಿ ತಂಡದ ವೇಗಿ ಜೋಶ್ ಹ್ಯಾಝಲ್ವುಡ್ ಮೊದಲ ಸ್ಥಾನದಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 10 ಇನಿಂಗ್ಸ್ಗಳಲ್ಲಿ 36.5 ಓವರ್ಗಳನ್ನು ಎಸೆದಿರುವ ಹ್ಯಾಝಲ್ವುಡ್ 18 ವಿಕೆಟ್ಗಳನ್ನು ಕಬಳಿಸಿ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.ಇನ್ನು ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವುದು ಕನ್ನಡಿಗ ಪ್ರಸಿದ್ಧ್ ಕೃಷ್ಣ. ಗುಜರಾತ್ ಟೈಟಾನ್ಸ್ ಪರ 8 ಪಂದ್ಯಗಳಲ್ಲಿ 31 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ 16 ವಿಕೆಟ್ಗಳನನ್ನು ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಹ್ಯಾಝಲ್ವುಡ್ ಜೊತೆ ಪೈಪೋಟಿ ನಡೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!