ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಪ್ರೀತಂ ಕೊನೆಯುಸಿರೆಳೆದಿದ್ದಾರೆ.
ಪ್ರೀತಂ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಮೃತರು ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.
3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?
ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…





