ಐಪಿಎಲ್ ನಿಂದ ಆರ್.ಸಿ.ಬಿ ಹೊರಗೋಗ್ಬಾರ್ದು ಅಂದ್ರೆ ಇಷ್ಟು ಪಂದ್ಯಗಳನ್ನು ಗೆಲ್ಲಲೇಬೇಕು….

ಐಪಿಎಲ್ 2025, ಸೀಸನ್ 18ರ ಅಂಕಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಗ್ರಸ್ಥಾನದಲ್ಲಿದ್ದು,16 ಪಾಯಿಂಟ್ಸ್ ಗಳನ್ನು ಪಡೆದುಕೊಂಡಿದ್ದರು ಸಹ ಇನ್ನು ಪ್ಲೇ ಆಫ್ ಗೆ ಆಯ್ಕೆಯಾಗಿಲ್ಲ. ಇನ್ನು ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್.ಸಿ.ಬಿ ತಂಡವು ಎಷ್ಟು ಪಂದ್ಯಗಳನ್ನು ಗೆಲ್ಲಲೇ ಬೇಕು ಆಗ ಮಾತ್ರ ಪ್ಲೇ ಆಫ್ಗೆ ಏರಲು ಸಾಧ್ಯವಾಗುತ್ತದೆ.ಇಂಡಿಯನ್ ಪ್ರೀಮಿಯರ್ ಲೀಗ್ನ 55 ಪಂದ್ಯಗಳು ಪೂರ್ಣಗೊಂಡರೂ ಯಾವುದೇ ತಂಡ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇತ್ತ ಮೂರು ತಂಡಗಳು ಪ್ಲೇಆಫ್ ರೇಸ್ನಿಂದ ಹೊರಬಿದ್ದಿದ್ದರೆ, 7 ತಂಡಗಳ ನಡುವೆ ಪ್ಲೇಆಫ್ ರೇಸ್ ಪೈಪೋಟಿ ಮುಂದುವರೆದಿದೆ. ಹೀಗಾಗಿ ಈ ವಾರದ ಪಂದ್ಯದೊಂದಿಗೆ ಪ್ಲೇಆಫ್ ಆಡಲಿರುವ ತಂಡಗಳ ಸ್ಪಷ್ಟ ಚಿತ್ರಣ ದೊರೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 11 ಪಂದ್ಯಗಳಲ್ಲಿ 8 ಜಯ ಸಾಧಿಸಿ ಇದೀಗ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಆರ್ಸಿಬಿ ತಂಡ ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್ ರೇಸ್ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿಯೇ ಆರ್ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ….

ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಮೂರು ಮ್ಯಾಚ್ಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮಣಿಸಿದರೆ, ಒಟ್ಟು 20 ಅಂಕಗಳನ್ನು ಪಡೆದು ಪ್ಲೇಆಫ್ಗೇರಲಿದೆ. ಪಂಜಾಬ್ ಕಿಂಗ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿದರೆ 19 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಲಿದೆ. ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಮಣಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಲಿದೆ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಅಂದರೆ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದರೆ ಒಟ್ಟು 17 ಅಂಕಗಳನ್ನು ಪಡೆದು ಪ್ಲೇಆಫ್ಗೆ ಅರ್ಹತೆ ಪಡೆಯಲಿದೆ.ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ.

ಹೀಗಾದಲ್ಲಿ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದ್ದು, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗಾಗಿಯೇ ಆರ್ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

 

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!