ಒಂದು ವಾರ ಐಪಿಎಲ್ ಸ್ಥಗಿತ ; ಬಿಸಿಸಿಐ ಅಧಿಕೃತ ಆದೇಶ ….

2025ರ ಐಪಿಎಲ್ ಸೀಸನ್ 18 ರ ಪಂದ್ಯಾವಳಿಯನ್ನು ಒಂದು ವಾರ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಈ ನಿರ್ಧಾರವನ್ನು ಎಲ್ಲಾ ತಂಡಗಳೊಂದಿಗೆ ಸಮಾಲೋಚನೆಯ ನಂತರ ತೆಗೆದುಕೊಳ್ಳಲಾಗಿದ್ದು, ಹೊಸ ವೇಳಾಪಟ್ಟಿಯನ್ನು ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.

ನಿನ್ನೆಯಿಂದ ಹರಿದಾಡುತ್ತಿದ್ದ ಸುದ್ದಿ ಇದೀಗ ನಿಜವಾಗಿದೆ. ಮಿಲಿಯನ್ ಡಾಲರ್ ಟೂರ್ನಿ 2025 ರ ಐಪಿಎಲ್ ಅನ್ನು ಒಂದು ವಾರದವರೆಗೆ ಮುಂದೂಡಲಾಗಿದೆ ಎಂದು ಬಿಸಿಸಿಐ ಅಧಿಕೃತ ಮಾಹಿತಿ ನೀಡಿದೆ. ಇದರರ್ಥ ವಾರದ ನಂತರ ಪರಿಸ್ಥಿತಿ ತಿಳಿಕೊಂಡರೆ ಐಪಿಎಲ್ ದ್ವಿತೀಯಾರ್ಧ ವಾರದ ನಂತರ ಆರಂಭವಾಗಲಿದೆ. ಇದು ಭಾರತದಲೇ ಮುಂದುವರೆಯಲಿದೆಯೋ ಅಥವಾ ವಿದೇಶವನ್ನು ಆಯ್ಕೆ ಮಾಡಲಾಗುತ್ತದೋ ಎಂಬುದು ವಾರದ ಬಳಿಕ ತಿಳಿಯಲಿದೆ. 2025 ರ ಐಪಿಎಲ್ ಪಂದ್ಯಾವಳಿಯನ್ನು ಕೇವಲ ಒಂದು ವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿಯೇ ಮಾಹಿತಿ ನೀಡಿದೆ.

ಮುಂದಿನ ವಾರ ಐಪಿಎಲ್ನ ಹೊಸ ವೇಳಾಪಟ್ಟಿ ಬಿಡುಗಡೆಯಾಗಬಹುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತಿಳಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಐಪಿಎಲ್ ಅನ್ನು ಇನ್ನೂ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿಲ್ಲ. ಇದನ್ನು ಕೇವಲ ಒಂದು ವಾರದ ಕಾಲ ಮುಂದೂಡಲಾಗಿದೆ. ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಹೊಸ ವೇಳಾಪಟ್ಟಿಯನ್ನು ಮತ್ತೆ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಿರುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ‘ಐಪಿಎಲ್ ಆಡಳಿತ ಮಂಡಳಿಯು ಎಲ್ಲಾ ತಂಡಗಳೊಂದಿಗೆ ಸೂಕ್ತ ಸಮಾಲೋಚನೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಫ್ರಾಂಚೈಸಿಗಳು ತಮ್ಮ ಆಟಗಾರರ ಕಾಳಜಿ ಮತ್ತು ಭಾವನೆಗಳನ್ನು ಹಾಗೂ ಪ್ರಸಾರಕರು, ಪ್ರಾಯೋಜಕರು ಮತ್ತು ಅಭಿಮಾನಿಗಳ ಅಭಿಪ್ರಾಯಗಳನ್ನು ಹಂಚಿಕೊಂಡಿವೆ. ನಮ್ಮ ಸಶಸ್ತ್ರ ಪಡೆಗಳ ಬಲ ಮತ್ತು ಸನ್ನದ್ಧತೆಯ ಬಗ್ಗೆ ಬಿಸಿಸಿಐಗೆ ಸಂಪೂರ್ಣ ನಂಬಿಕೆ ಇದೆ, ಆದರೆ ಎಲ್ಲಾ ಪಾಲುದಾರರ ಸಾಮೂಹಿಕ ಹಿತಾಸಕ್ತಿಯಿಂದ ಈ ನಿರ್ಧಾರ ತೆಗೆದುಕೊಳ್ಳುವುದು ಸರಿ ಎಂದು ಮಂಡಳಿ ಭಾವಿಸಿದೆ ಎಂದು ಐಪಿಎಲ್ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!