ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿ ಎಲ್ಲರ ಮೆಚ್ಚುಗೆಯನ್ನು ಪಡೆದ ಗಜರಾಜ…..

ಪ್ರಾಣಿಗಳೇ ಗುಣದಲಿ ಮೇಲು, ಮಾನವನದಕ್ಕಿಂತ ಕೀಳು ಎಂಬ ಮಾತಿನಂತೆ. ಆನೆಯೊಂದು ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇತ್ತ ಮಾನವರು ಐಶ್ವರ್ಯ, ಅಂತಸ್ತು,ಹಣ ಇನ್ನು ಮುಂತಾದ ಆಸೆಗಳಿಗೆ ಬಲಿಯಾಗಿ ಮೃಗಗಳಿಗಿಂತ ಕೀಳಾಗಿ ವರ್ತಿಸುತ್ತಿದ್ದಾರೆ. ಹೌದು ಮನುಜನಿಗೆ ಹೋಲಿಸಿದರೆ ಪ್ರಾಣಿಗಳಲ್ಲಿ ಒಳ್ಳೆಯತನ, ಒಳ್ಳೆಯ ಗುಣ ತುಸು ಹೆಚ್ಚೇ ಇದೆ. ಇದಕ್ಕೆ ಉತ್ತಮ ನಿದರ್ಶನದಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದ್ದು, ಕೊಳದಲ್ಲಿ ಬಿದ್ದು ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ಚಿಂಕಾರವನ್ನು ಆನೆಯೊಂದು ರಕ್ಷಿಸುವ ಮೂಲಕ ಒಳ್ಳೆಯತನವನ್ನು ಮೆರೆದಿದೆ. ಗಜರಾಜನ ಈ ದೊಡ್ಡ ಗುಣಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.

ಈಗಂತೂ ಮನುಷ್ಯನಲ್ಲಿ ಮಾನವೀಯತೆ , ಒಳ್ಳೆಯತನ ಎನ್ನುವಂತಹದ್ದು ಸಂಪೂರ್ಣವಾಗಿ ಮರೆಯಾಗಿದೆ. ಹಣ, ಆಸ್ತಿ-ಅಂತಸ್ತಿನ ನಡುವೆ ಸಂಬಂಧಕ್ಕೆ ಮಹತ್ವವೇ ಇಲ್ಲದಂತಾಗಿದೆ. ಇನ್ನೂ ಮನುಷ್ಯರಲ್ಲಿ ಒಳ್ಳೆಯತನ ಕಾಣಸಿಗುವುದೇ ಅಪರೂಪವಾಗಿಬಿಟ್ಟಿದ್ದು, ಇಲ್ಲೊಂದು ಆನೆ ಮಾನವೀಯತೆ, ಒಳ್ಳೆಯತನದ ಪಾಠವನ್ನು ಕಲಿಸಿದೆ. ಹೌದು ಕೊಳದಲ್ಲಿ ಬಿದ್ದ ಚಿಂಕಾರವನ್ನು ರಕ್ಷಿಸುವ ಮೂಲಕ ಆನೆಯೊಂದು ಒಳ್ಳೆಯತನ ಏನೆಂಬುದನ್ನು ತೋರಿಸಿಕೊಟ್ಟಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಗಜರಾಜನ ದೊಡ್ಡ ಗುಣಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಚಿಂಕಾರವೊಂದು ಕೊಳದಲ್ಲಿ ಬಿದ್ದು ಒದ್ದಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು. ಇದನ್ನು ಕಂಡಂತಹ ಗಜರಾಜ ಅಲ್ಲಿಗೆ ಹೋಗಿ, ತನ್ನ ಸೊಂಡಿಲಿನ ಸಹಾಯದಿಂದ ಕೊಳದಲ್ಲಿ ಬಿದ್ದ ಚಿಂಕಾರವನ್ನು ಮೇಲೆತ್ತುವ ಮೂಲಕ ಮುಗ್ಧ ಜೀವವನ್ನು ರಕ್ಷಣೆ ಮಾಡಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!