ಚಿಲ್ಲರೆ ಕಾಸಿನಲ್ಲಿ ಪತ್ನಿಗೆ ಮಂಗಳಸೂತ್ರ ಖರೀದಿಸಲು ಬಂದ ವೃದ್ಧ, ಮಂಗಳಸೂತ್ರವನ್ನೇ ಉಡುಗೊರೆಯಾಗಿ ಕೊಟ್ಟ ಅಂಗಡಿಯ ಮಾಲೀಕ….

ಈಗಿನ ಕಾಲದಲ್ಲಿ ದುಡ್ಡಿಗೆ ಬೆಲೆ, ಯಾರಿಗಾದ್ರೂ ದುಡ್ಡು ಕೊಟ್ಟಿದ್ದರೆ ಒಂದು ರೂಪಾಯಿ ಬಿಡದೇ ವಸೂಲಿ ಮಾಡುವ ಕಾಲದಲ್ಲಿ ನಾವಿದ್ದೇವೆ. ಆದರೆ ಇದಕ್ಕೆ ತದ್ವಿರುದ್ಧವಾದ ಘಟನೆಯೂ ನಡೆದಿದೆ. ವೃದ್ಧ ದಂಪತಿಯ ಶುದ್ಧ ಪ್ರೀತಿ ಹಾಗೂ ಚಿನ್ನದಂಗಡಿ ಮಾಲೀಕನ ಹೃದಯವಂತಿಕೆಗೆ ಈ ವಿಡಿಯೋ ಸಾಕ್ಷಿಯಾಗಿದೆ. ಮಾಂಗಲ್ಯ ಖರೀದಿಸಲು ಚಿನ್ನದಂಗಡಿಗೆ ಬಂದ ದಂಪತಿಯ ಬಳಿ, ಅಂಗಡಿ ಮಾಲೀಕನು ಕೇವಲ 20 ರೂ ಸ್ವೀಕರಿಸುವ ಮೂಲಕ ಹೃದಯವಂತಿಕೆ ಮೆರೆದಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಈ ವ್ಯಕ್ತಿಯ ಒಳ್ಳೆತನವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

ಚಿನ್ನದ ಬೆಲೆ ಗಗನಕ್ಕೆ ಏರುತ್ತಿದೆ, ಹೀಗಾಗಿ ಆಭರಣವನ್ನು ದೂರದಿಂದ ನೋಡಿಯೇ ಖುಷಿ ಪಡಬೇಕು. ಈಗಿನ ಕಾಲದಲ್ಲಿ ಆಭರಣ ಖರೀದಿ ಮಾಡುವುದೆಂದರೆ ಮಧ್ಯಮ ಹಾಗೂ ಬಡವರ್ಗದ ಜನರಿಗೆ ಕನಸೇ ಸರಿ. ಆಭರಣ ಎಷ್ಟೇ ದುಬಾರಿಯಾಗಿರಲಿ ಈ ಹೆಣ್ಣು ಮಕ್ಕಳು ತಮ್ಮ ಪತಿ ಉಡುಗೊರೆಯಾಗಿ ಆಭರಣ ನೀಡಿದರೆ ಖುಷಿ ಪಡುತ್ತಾರೆ. ವೃದ್ಧ ವ್ಯಕ್ತಿಯೊಬ್ಬನು ತನ್ನ ಪತ್ನಿಗೆ ಮಂಗಳಸೂತ್ರ ಕೊಡಿಸಲು ಆಭರಣದ ಅಂಗಡಿಗೆ ಕರೆದುಕೊಂಡು ಬಂದಿದ್ದಾನೆ. ಆದರೆ ಅಂಗಡಿ ಮಾಲೀಕನು ಈ ದಂಪತಿಯ ಕಷ್ಟವನ್ನು ಅರಿತು ಇವರಿಂದ 20 ರೂಪಾಯಿ ಸ್ವೀಕರಿಸುವ ಮೂಲಕ ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ಘಟನೆಯೂ ಮಹಾರಾಷ್ಟ್ರದ ಸಂಭಾಜಿನಗರದ ಗೋಪಿಕಾ ಜ್ಯುವೆಲ್ಲರ್ಸ್ನಲ್ಲಿ ನಡೆದಿದೆ ಎನ್ನಲಾಗಿದೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದುಕೊಂಡಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ 93 ವರ್ಷದ ವೃದ್ಧನು ಆಭರಣ ಖರೀದಿಸಲು ತನ್ನ ಮಡದಿಯೊಂದಿಗೆ ಆಭರಣದ ಅಂಗಡಿಗೆ ಬಂದಿದ್ದಾನೆ. ಅವರು ತೊಟ್ಟ ಉಡುಗೆಯೇ ಅವರ ಆರ್ಥಿಕ ಸ್ಥಿತಿ ಹೇಗಿದೆ ಎನ್ನುವುದನ್ನು ಸೂಚಿಸುತ್ತದೆ. ಅಂಗಡಿಗೆ ಬಂದ ಈ ವೃದ್ಧ ದಂಪತಿಗಳು ಹಾರ ಮತ್ತು ಮಂಗಳಸೂತ್ರವನ್ನು ಖರೀದಿಸಲು ಮುಂದಾಗುತ್ತಾರೆ. ಇವರಿಬ್ಬರ ಪ್ರೀತಿ ಬಾಂಧವ್ಯವನ್ನು ನೋಡಿದ ಚಿನ್ನದ ಅಂಗಡಿ ಮಾಲೀಕನು ಅವರೊಂದಿಗೆ ಸಂಭಾಷಣೆಗೆ ಇಳಿದಿದ್ದಾನೆ. ಈ ವೇಳೆಯಲ್ಲಿ ನಿಮ್ಮ ಬಳಿ ಹಣ ಎಷ್ಟಿದೆ ಎಂದು ಕೇಳಿದ್ದು, ವೃದ್ಧ ಮಹಿಳೆ 1,120 ರೂ. ಹಣವನ್ನು ತೋರಿಸುತ್ತಿರುವುದನ್ನು ನೋಡಬಹುದು.ಅವರ ಆರ್ಥಿಕ ಸ್ಥಿತಿ ಹಾಗೂ ಕಷ್ಟವನ್ನು ಅರಿತ ಅಂಗಡಿ ಮಾಲೀಕನು “ಇಷ್ಟು ಹಣ?” ಎಂದಿದ್ದಾನೆ. ಆ ವ್ಯಕ್ತಿಯ ಮಾತಿನ ದಾಟಿಯನ್ನು ಅರಿತ ವೃದ್ಧ ಚೀಲಕ್ಕೆ ಕೈ ಹಾಕಿ ನಾಣ್ಯ ತುಂಬಿದ ಗಂಟನು ತೆಗೆದುಕೊಡುತ್ತಾನೆ. ಈ ವೇಳೆಯಲ್ಲಿ ಅಂಗಡಿ ಮಾಲೀಕನು ವೃದ್ಧ ಮಹಿಳೆಯೂ ನೀಡಿದ ಹಣವನ್ನು ಆಕೆಗೆ ಹಿಂದಿರುಗಿಸಿ, ಇದು ಪ್ರೀತಿಯ ಉಡುಗೊರೆ ಎಂದು ಹೇಳಿ ಈ ಆಭರಣಕ್ಕೆ ತಲಾ 20 ರೂ ಹಾಗೂ 10 ರೂ ಮಾತ್ರ ವಿಧಿಸಿರುವುದಾಗಿ ಹೇಳಿರುವುದನ್ನು ನೋಡಬಹುದು. ಹೀಗೆನ್ನುತ್ತಿದ್ದಂತೆ ಈ ವೃದ್ಧ ದಂಪತಿಗಳು ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!