ಟ್ಯಾಟೂ ಪ್ರಿಯರಿಗೂ ಶಾಕ್, ಆರೋಗ್ಯ ಇಲಾಖೆ ಅಲರ್ಟ್: ಟ್ಯಾಟೂನಿಂದ ಬರುತ್ತೆ ಹೆಚ್ಐವಿ, ಕ್ಯಾನ್ಸರ್!

ಬೆಂಗಳೂರು: ಟ್ಯಾಟೂ (Tattoo) ಪ್ರಿಯರಿಗೂ ಶಾಕ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಟ್ಯಾಟೂ ಹಾಕುವವರಿಗೆ ಮತ್ತು ಹಾಕಿಸಿಕೊಳ್ಳವವರಿಗೆ ಇಬ್ಬರಿಗೂ ಅನ್ವಯವಾಗುವಂತೆ ಹೊಸ ಕಾನೂನು ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೊಸ ಕಾನೂನಿನ ಮೂಲಕ ಅವೈಜ್ಞಾನಿಕವಾಗಿ, ಬೇಕಾಬಿಟ್ಟಿಯಾಗಿ, ಎಲ್ಲೆಂದರಲ್ಲಿ ಟ್ಯಾಟೂ ಹಾಕುವುದಕ್ಕೆ ರಾಜ್ಯ ಸರ್ಕಾರ ಕಡಿವಾಣ ಹಾಕಲು ಹೊರಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ಸರ್ಕಾರವು ಟ್ಯಾಟೂ ಹಾಕಿಸಿಕೊಳ್ಳುವ ಮತ್ತು ಹಾಕುವವರಮೇಲೆ ಹೊಸ ಕಾನೂನು ಜಾರಿಗೆ ತರಲು ಯೋಜಿಸಿದೆ. ಇದು ಅನೈರ್ಮಲ್ಯದಿಂದ ಉಂಟಾಗುವ ಸೋಂಕು ತಡೆಯುವ ಉದ್ದೇಶ ಹೊಂದಿದೆ. ಈ ಕಾನೂನು ಟ್ಯಾಟೂ ಆರ್ಟಿಸ್ಟ್ಗಳಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊಂದಿರುತ್ತದೆ. ಚರ್ಮದ ಕ್ಯಾನ್ಸರ್ ಮತ್ತು ಹೆಚ್ಐವಿಯಂತಹ ಸೋಂಕುಗಳ ಅಪಾಯವನ್ನು ಕಡಿಮೆ ಮಾಡುವುದು ಇದರ ಉದ್ದೇಶ.
ಟ್ಯಾಟೂದಿಂದ ಬರುತ್ತಿದೆ ಹೆಚ್ಐವಿ, ಕ್ಯಾನ್ಸರ್!
ಚರ್ಮ ಕ್ಯಾನ್ಸರ್, ಹೆಚ್ಐವಿ ಹಾಗೂ ಚರ್ಮ ರೋಗ, ಹೆಪಟೈಟಿಸ್ ಬಿ, ಹೆಪಟೈಟಿಸ್ ಸಿ ಹಾಗೂ ಸ್ಟ್ಯಾಫಿಲೋಕೊಕಸ್ ಔರೆಸ್ನಂತಹ ಮಾರಣಾಂತಿಕ ಸೋಂಕುಗಳು ಜನರಲ್ಲಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಿದಾಗ ಈ ಸೋಂಕುಗಳು ಹರಡಲು ಟ್ಯೂಟೂ ಕೂಡ ಒಂದು ಕಾರಣವಾಗಿದೆ. ಹೀಗಾಗಿ, ಸರ್ಕಾರ ಹೊಸ ಕಾನೂನು ಜಾರಿಗೆ ತರಲು ಮುಂದಾಗಿದೆ.

MES ಪುಂಡರು ಕನ್ನಡಿಗರ ತಂಟೆಗೆ ಬಂದ್ರೆ ಸರಿ ಇರಲ್ಲ!: MES ಪುಂಡರಿಗೆ ಎಚ್ಚರಿಕೆ ಕೊಟ್ಟ ಕನ್ನಡಾಂಬೆ ರಕ್ಷಣಾ ವೇದಿಕೆ
ಹೊಸ ಕಾನೂನು ಯಾವ ರೀತಿ ಇರಲಿದೆ?
ದೇಶದಲ್ಲಿ ಟ್ಯಾಟೂಗೆ ಯಾವುದೇ ನಿಯಂತ್ರಣ ಕಾನೂನುಗಳಿಲ್ಲ. ಮೊದಲ ಬಾರಿಗೆ ರಾಜ್ಯ ಸರ್ಕಾರ ಟ್ಯಾಟೂಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಟ್ಯಾಟೂ ಹಾಕಿಸಿಕೊಳ್ಳುವರು ಕಡ್ಡಾಯವಾಗಿ ವೈದ್ಯರಿಂದ ತಪಾಸಣೆ ಪತ್ರ ಪಡೆದಿರಬೇಕು. ಟ್ಯಾಟೂ ಹಾಕುವರು ತಾವು ಬಳಸುವ ಬಣ್ಣ, ಕ್ಯಮಿಕಲ್, ಸೂಜಿ ಮತ್ತು ಸ್ವಚ್ಛತೆ ಕುರಿತಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತಹ ಹೊಸ ಮಾರ್ಗಸೂಚಿಗಳನ್ನು ತರಲು ರಾಜ್ಯ ಸರ್ಕಾರ ಮುಂದಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!