ಡಿಸಿಎಂ ಡಿಕೆ ಶಿವಕುಮಾರ್ ಜತೆ ಬಹಿರಂಗ ಚರ್ಚೆಗೆ ಸಿದ್ಧ:ತೇಜಸ್ವಿ ಸೂರ್ಯ

ಬೆಂಗಳೂರಿನ ಸುರಂಗ ಮಾರ್ಗ ಯೋಜನೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕಾಂಗ್ರೆಸ್ ನಡುವೆ ವಾಗ್ವಾದ ತೀವ್ರಗೊಂಡಿದೆ. ಯೋಜನೆ ಭ್ರಷ್ಟಾಚಾರದಿಂದ ಕೂಡಿದ್ದು, ಬೆಂಗಳೂರಿಗೆ ಅದರ ಅಗತ್ಯವೇ ಇಲ್ಲ ಎಂದು ಸೂರ್ಯ ಪ್ರತಿಪಾದಿಸಿದರೆ, ಕಾಂಗ್ರೆಸ್ ಯೋಜನೆಯ ಪ್ರಯೋಜನಗಳನ್ನು ಪ್ರತಿಪಾದಿಸುತ್ತಿದೆ. ಈ ಮಧ್ಯೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸೂರ್ಯ ಸವಾಲು ಹಾಕಿದ್ದಾರೆ.

ಬೆಂಗಳೂರು, ಜುಲೈ 17: ಬೆಂಗಳೂರಿನಲ್ಲಿ ಉದ್ದೇಶಿತ ಸುರಂಗ ಮಾರ್ಗ ರಸ್ತೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಆಡಳಿತರೂಢ ಕಾಂಗ್ರೆಸ್ನಡುವಣ ವಾಕ್ಸಮರ ತೀವ್ರಗೊಂಡಿದೆ. ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ತೇಜಸ್ವಿ ಸೂರ್ಯ ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಅಲ್ಲದೆ, ಯೋಜನೆ ಹೇಗೆ ಸಾಧಕವಲ್ಲ ಎಂಬುದನ್ನು ವಿವರವಾಗಿ ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಿದ್ದರು.

ಅದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಸಂದೇಶ ಪ್ರಕಟಿಸುವ ಮೂಲಕ ತಿರುಗೇಟು ನೀಡಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ, ಸುರಂಗ ರಸ್ತೆ ಯೋಜನೆಯ ನೇತೃತ್ವ ವಹಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಸಿದ್ಧವಿದ್ದೇನೆ ಎಂದಿದ್ದಾರೆ.

ಸುರಂಗ ರಸ್ತೆಗೆ ಸಂಬಂಧಿಸಿದ ತಾಂತ್ರಿಕ ಸಲಹೆ ಮತ್ತು ಸಾರ್ವಜನಿಕ ಚರ್ಚೆಗೆ ನೀವು (ಕಾಂಗ್ರೆಸ್ ಸರ್ಕಾರ) ನಿಜಕ್ಕೂ ಮುಕ್ತರಾಗಿದ್ದರೆ, ಡಿಕೆ ಶಿವಕುಮಾರ್ ಜೊತೆ ಬಹಿರಂಗ ಚರ್ಚೆಗೆ ಪ್ರಸ್ತಾಪಿಸುತ್ತಿದ್ದೇನೆ. ಸಮಯ ಮತ್ತು ಸ್ಥಳವನ್ನು ನೀವೇ ನಿಗದಿ ಮಾಡಿ. ಒಳಿತು ಕೆಡುಕುಗಳನ್ನು ಆರೋಗ್ಯಕರ ರೀತಿಯಲ್ಲಿ ಚರ್ಚಿಸುವುದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ. ನಿಮ್ಮಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದ್ದೇನೆ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!