ದೆಹಲಿಯ ಬೀದಿ ನಾಯಿಗಳನ್ನು 8 ವಾರದೊಳಗೆ ಹಿಡಿಯಲು ಆದೇಶ ನೀಡಿದ ಸುಪ್ರೀಂ ಕೋರ್ಟ್ !!!

ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿ ಘಟನೆಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ.ಜೆ.ಬಿ.ಪರ್ದಿ ವಾಲಾ ಹಾಗೂ ನ್ಯಾ.ಆರ್. ಮಹಾದೇವನ್ ಅವರಿದ್ದ ಪೀಠ, ‘ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸಿದರೆ ಸಾಲದು, ಬೀದಿ ನಾಯಿಗಳನ್ನು ದಿಲ್ಲಿಯ ಎಲ್ಲಾ ಜನವಸತಿ ಪ್ರದೇಶಗಳಿಂದ ಬೇರೆಡೆಗೆ ಸ್ಥಳಾಂತರಿಸಬೇಕು ಹೊರವಲಯ ದಲ್ಲಿ ಶಾಶ್ವತವಾಗಿ ಆಶ್ರಯತಾಣ ಸ್ಥಾಪಿಸಿ ಎಂದಿದ್ದಾರೆ .ಇನ್ನೂ ಪ್ರಾಣಿ ಮತ್ತು ನಾಯಿ ಪ್ರಿಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ರೇಬೀಸ್‌ಗೆ ಬಲಿಯಾದ ಮಕ್ಕಳ ಪ್ರಾಣವನ್ನು ಮತ್ತೆ ಕರೆತರಲು ಸಾಧ್ಯವಾಗುತ್ತದೆಯೇ? ಎಂದು ಪ್ರಶ್ನಿಸಿದೆ. ಯಾವುದಾದರೂ ವ್ಯಕ್ತಿ ಅಥವಾ ಸಂಸ್ಥೆ ಬೀದಿ ನಾಯಿಗಳನ್ನು ತೆಗೆದುಹಾಕಲು ಅಡ್ಡಿಪಡಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ.

ಸುಪ್ರೀಂ ಕೋರ್ಟ್ ಇಂದು ಒಂದು ಮಹತ್ವದ ತೀರ್ಪನ್ನು ನೀಡಿದೆ. ಸುಪ್ರೀಂ ಕೋರ್ಟ್ ಇಂದು ದೆಹಲಿ-ಎನ್‌ಸಿಆರ್ ಪ್ರದೇಶದ ಎಲ್ಲಾ ನಾಗರಿಕ ಸಂಸ್ಥೆಗಳು 8 ವಾರಗಳೊಳಗೆ ಪ್ರತಿಯೊಂದು ಬೀದಿ ನಾಯಿಯನ್ನು ಒಟ್ಟುಗೂಡಿಸಿ, ಗೊತ್ತುಪಡಿಸಿದ ನಾಯಿಗಳ ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶಿಸಿದೆ. ದೆಹಲಿಯಲ್ಲಿ ನಾಯಿ ಕಡಿತದಿಂದ ರೇಬೀಸ್‌ಗೆ ಬಲಿಯಾದ 6 ವರ್ಷದ ಬಾಲಕಿ ಚಾವಿ ಶರ್ಮಾ ಸಾವನ್ನಪ್ಪಿದ ದುರಂತ ಘಟನೆಯ ಬಳಿಕ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ಪ್ರಕರಣದ ವಿಚಾರಣೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದೆ.

ಯಾವುದೇ ಬೀದಿ ಪ್ರಾಣಿಗಳನ್ನು ತೆಗೆದುಹಾಕದಂತೆ ಅಥವಾ ತಪ್ಪಿಸಿಕೊಳ್ಳದಂತೆ ಖಚಿತಪಡಿಸಿಕೊಳ್ಳಲು ಎಲ್ಲಾ ಆಶ್ರಯಗಳನ್ನು ಸಿಸಿಟಿವಿ ಮೂಲಕ ಮೇಲ್ವಿಚಾರಣೆ ಮಾಡಬೇಕು ಎಂದು ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್‌ನ ಈ ಕ್ರಮವು ಸಂವಿಧಾನದ 32, 226 ಮತ್ತು 142ನೇ ವಿಧಿಗಳಿಂದ ಬಂದಿದೆ. ಇದು ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸಲು ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡುತ್ತದೆ. “ದೆಹಲಿಯ ಬೀದಿಗಳಲ್ಲಿ ನಾಯಿಗಳ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಮಕ್ಕಳು ಬೆಲೆ ತೆರುತ್ತಿದ್ದಾರೆ” ಎಂಬ ಜುಲೈ 28ರ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಹೇಳಿದೆ. ಈ ವರದಿಯಲ್ಲಿ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರಿಗೆ ನೂರಾರು ಬೀದಿನಾಯಿಗಳು ಕಚ್ಚಿದ ಘಟನೆಗಳನ್ನು ಉಲ್ಲೇಖಿಸಿತ್ತು.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ವರ್ಷದ ಜನವರಿ ಮತ್ತು ಜೂನ್ ನಡುವೆ ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು 49 ರೇಬೀಸ್ ಪ್ರಕರಣಗಳು ವರದಿಯಾಗಿವೆ. ಈ ಅವಧಿಯಲ್ಲಿ ರಾಜಧಾನಿಯಲ್ಲಿ 35,198 ಪ್ರಾಣಿ ಕಡಿತದ ಘಟನೆಗಳು ವರದಿಯಾಗಿವೆ. ಹೀಗಾಗಿ, 8 ದಿನಗಳಲ್ಲಿ ಕ್ರಿಯಾ ಯೋಜನೆಯನ್ನು ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ. ಇದೇ ವೇಳೆ ಪ್ರಾಣಿಪ್ರಿಯರನ್ನೂ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ಬಗ್ಗೆ ಮಾತನಾಡುವವರು ಪ್ರಾಣ ಕಳೆದುಕೊಂಡ ಮಕ್ಕಳ ಜೀವವನ್ನು ವಾಪಾಸ್ ಕೊಡುತ್ತಾರಾ? ಎಂದು ಪ್ರ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!