ಪಾಕ್ ಸೂಪರ್ ಲೀಗ್ ತೊರೆದಿದ್ದ ಆಟಗಾರ ಐಪಿಎಲ್ ನಲ್ಲಿ ಶೂನ್ಯಕ್ಕೆ ಔಟ್..!

ಪಂಜಾಬ್ ಕಿಂಗ್ಸ್ ತಂಡ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಮಿಚೆಲ್ ಓವನ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಂಡಿತು. ಹೀಗೆ ಪಾಕಿಸ್ತಾನ ಸೂಪರ್ ಲೀಗ್ ನಿಂದ ಐಪಿಎಲ್ ಗೆ ಬಂದ ಮಿಚೆಲ್ ಓವನ್ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 2 ಎಸೆತಗಳಲ್ಲಿ ಖಾತೆ ತೆರೆಯದೆ ಔಟ್ ಆದರು. ಬಿಗ್ ಬ್ಯಾಷ್ ಲೀಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಓವನ್ ಐಪಿಎಲ್ ನಲ್ಲಿ ನಿರಾಶೆ ಉಂಟುಮಾಡಿದರು.

ಐಪಿಎಲ್ 2025 ರ 59 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯುತ್ತಿದೆ. ಪ್ಲೇ ಆಫ್ ದೃಷ್ಟಿಯಿಂದ ಈ ಪಂದ್ಯದ ಗೆಲುವು ಪಂಜಾಬ್ಗೆ ಬಹಳ ಮುಖ್ಯವಾಗಿದೆ. ಹೀಗಾಗಿ ಪಂಜಾಬ್ ತನ್ನ ತಂಡದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿತ್ತು. ಅದರಂತೆ ಪಾಕಿಸ್ತಾನ ಸೂಪರ್ ಲೀಗ್ನಲ್ಲಿ ಆಡುತ್ತಿದ್ದ ವಿದೇಶಿ ಆಟಗಾರನನ್ನು ದ್ವಿತೀಯಾರ್ಧದ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ಸೇರಿಸಿಕೊಂಡಿತು. ವಾಸ್ತವವಾಗಿ ಪಂಜಾಬ್ ಕಿಂಗ್ಸ್ನ ಡ್ಯಾಶಿಂಗ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಗಾಯದಿಂದಾಗಿ ಐಪಿಎಲ್ 2025 ರಿಂದ ಹೊರಗುಳಿದಿದ್ದರು. ಹೀಗಾಗಿ ಪಿಎಸ್ಎಲ್ನಲ್ಲಿ ಆಡುತ್ತಿದ್ದ ಆಸ್ಟ್ರೇಲಿಯಾದ ಯುವ ಆಲ್‌ರೌಂಡರ್ ಮಿಚೆಲ್ ಓವನ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಂಡಿತ್ತು. ಆದರೆ ಮಿಚೆಲ್ ಓವನ್ ತಮ್ಮ ಚೊಚ್ಚಲ ಐಪಿಎಲ್ ಪಂದ್ಯದಲ್ಲಿ ಕೇವಲ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.

ಅದರಂತೆ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡುವ ಅವಕಾಶ ಪಡೆದ ಮಿಚೆಲ್ ಓವನ್ ಕೇವಲ 2 ಎಸೆತಗಳನ್ನು ಎದುರಿಸಿ ತಮ್ಮ ವಿಕೆಟ್ ಕಳೆದುಕೊಂಡರು. ಮಿಚೆಲ್ ಓವನ್ಗೆ ಖಾತೆ ತೆರೆಯಲು ಆಗಲಿಲ್ಲ. ಪಂಜಾಬ್ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆದಿದ್ದ ಮಿಚೆಲ್, ಕ್ವೆನಾ ಎಂಫಕಾ ಅವರ ಅದ್ಭುತ ಎಸೆತದಲ್ಲಿ ಸಂಜು ಸ್ಯಾಮ್ಸನ್‌ಗೆ ಕ್ಯಾಚ್ ನೀಡಿದರು. ಮಿಚೆಲ್ ಓವನ್ ಪಾಕಿಸ್ತಾನ ಸೂಪರ್ ಲೀಗ್ 2025 ರಲ್ಲಿ ಪೇಶಾವರ್ ಝಲ್ಮಿ ಪರ ಒಟ್ಟು 8 ಪಂದ್ಯಗಳನ್ನು ಆಡಿದ್ದು, ಕೇವಲ 102 ರನ್‌ಗಳನ್ನು ಮಾತ್ರ ಕಲೆಹಾಕಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!