ಬಜೆಟ್ 2025 ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ.

ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ಸಿಕ್ಕಿದ್ದೇನು? ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ.

ಬೆಂಗಳೂರು ನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ನೀಡಲಾದ ಹಣ ಮತ್ತು ಘೋಷಣೆಗಳು
ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ 4 ಲಕ್ಷ ಕೋಟಿ ರೂ ಗಾತ್ರದ್ದಾಗಿದ್ದು, ಬೆಂಗಳೂರಿಗೆ ಸಾಕಷ್ಟು ಹಣ ನೀಡಲಾಗಿದೆ. ಟನಲ್ ಕಾರಿಡಾರ್ ಯೋಜನೆಗಳು, ಬ್ರ್ಯಾಂಡ್ ಬೆಂಗಳೂರು ಅಡಿ ವಿವಿಧ ಯೋಜನೆಗಳು, ಕುಡಿಯುವ ನೀರಿನ ಯೋಜನೆ, ಒಳಚರಂಡಿ ವ್ಯವಸ್ಥೆ ಬಲಪಡಿಸುವ ಯೋಜನೆ ಇವೆಲ್ಲಕ್ಕೂ ಬಜೆಟ್ನಲ್ಲಿ ಹಣ ನೀಡಲಾಗಿದೆ.

ಕರ್ನಾಟಕದ ಬಜೆಟ್ 2025-26, ಬೆಂಗಳೂರು ನಗರಕ್ಕೆ ಸಿಕ್ಕಿದ್ದು..
• ಬೆಂಗಳೂರಿನಲ್ಲಿ ಟನಲ್ ಕಾರಿಡಾರ್ ಯೋಜನೆಗೆ 19,000 ಕೋಟಿ ರೂ
• ನಮ್ಮ ಮೆಟ್ರೋ ಹಂತ-3 ಯೋಜನೆ ಅಡಿ 40.50 ಕಿ.ಮಿ. ಉದ್ದದ ಡಬಲ್-ಡೆಕ್ಕರ್ ಮೇಲ್ಸೇತುವೆ 8,916 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ.
• ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ನಮ್ಮ ಮೆಟ್ರೋ ಜಾಲ ಅಭಿವೃದ್ಧಿ.
• “ಬ್ರ್ಯಾಂಡ್ ಬೆಂಗಳೂರು” ಅಡಿ, 1,800 ಕೋಟಿ ರೂ. ಮೊತ್ತದ 21 ಯೋಜನೆಗಳಿಗೆ ಅನುಮೋದನೆ.
• 413 ಕೋಟಿ ರೂ. ವೆಚ್ಚದಲ್ಲಿ “ಸಮಗ್ರ ಆರೋಗ್ಯ ಯೋಜನೆ” ಜಾರಿ.
• ಬೆಂಗಳೂರು ನಗರದಲ್ಲಿ ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ನಿರ್ಮಿಸಲು 3 ಸಾವಿರ ಕೋಟಿ ರೂ. ಆರ್ಥಿಕ ನೆರವು.
• ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆಯಿಂದ 50 ಲಕ್ಷ ಜನರಿಗೆ ನೀರು ಪೂರೈಕೆ.
• ಕಾವೇರಿ 6ನೇ ಹಂತ ಯೋಜನೆ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ತಯಾರಿಕೆ
• BWSSB ವತಿಯಿಂದ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗ ಪಡೆಯಲು PPP ಮಾದರಿಯಲ್ಲಿ ಯೋಜನೆ.
• ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ: 73 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ 27 ಸಾವಿರ ಕೋಟಿ ರೂ.
• ಹವಾಮಾನ ವೈಪರಿತ್ಯದಿಂದ ಉಂಟಾಗುವ ಪ್ರವಾಹ ನಿಯಂತ್ರಣ ಮತ್ತು ಒಳಚರಂಡಿ ವ್ಯವಸ್ಥೆಯ ಸುಧಾರಣೆಗಾಗಿ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್ಎಸ್ಬಿಗೆ ₹3,000 ಕೋಟಿ ಅನುದಾನ
• 300 ಕಿಮೀ ರಸ್ತೆ ಅಭಿವೃದ್ಧಿಗೆ ₹3,000 ಕೋಟಿ ರೂ
• ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಅಭಿವೃದ್ಧಿಗೆ ₹1,070 ಕೋಟಿ ಅನುದಾನ
• “ಸೇಫ್ ಸಿಟಿ” ಯೋಜನೆಗೆ ₹667 ಕೋಟಿ ರೂ ನೀಡಲಾಗುವುದು. ಈ ಯೋಜನೆಯಡಿಯಲ್ಲಿ 7,500 ಕ್ಯಾಮೆರಾಗಳು, 10 ಡ್ರೋನ್ಗಳು, 560 ಬಾಡಿ-ಕ್ಯಾಮ್ಗಳು ಅಳವಡಿಸಲಾಗುತ್ತಿದೆ
• ಮಹಿಳಾ ಭದ್ರತೆಗಾಗಿ 60 ಮಹಿಳಾ ಔಟ್-ಪೋಸ್ಟ್ ಠಾಣೆಗಳ ನಿರ್ಮಾಣ
• ಬೆಂಗಳೂರಿನಲ್ಲಿ ಸಿಗ್ನಲ್ ಫ್ರೀ ಜಂಕ್ಷನ್ಗಳ ನಿರ್ಮಾಣ
• 14 ಕೆರೆಗಳ ಅಭಿವೃದ್ಧಿ ಯೋಜನೆಗೆ 35 ಕೋಟಿ ರೂ
• 50 ಲಕ್ಷ ಜನರಿಗೆ ಉಪಯೋಗವಾಗುವ ಕಾವೇರಿ 5ನೇ ಹಂತದ ನೀರು ಸರಬರಾಜು ಯೋಜನೆಗೆ 5,550 ಕೋಟಿ ರೂ


ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವ ಧನ ಹೆಚ್ಚಳ
ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ಹೆಚ್ಚಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿಗಳು ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಬಿಸಿಯೂಟ ಸಿಬ್ಬಂದಿಗೂ ವೇತನ ಏರಿಕೆ ಆಗಲಿದೆ. ಹೆಚ್ಚುವರಿಯಾಗಿ, 100 ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿಯೂ, 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿಯೂ ಉನ್ನತೀಕರಿಸಲಾಗುವುದು ಎಂದು ಘೋಷಿಸಿದ್ದಾರೆ.

LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ. ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು ಎಂದು ಘೋಷಿಸಿದರು.


ಹೆಲ್ತ್ ಮಿಕ್ಸ್ ಪುಡಿ 5 ದಿನಗಳಿಗೆ ವಿಸ್ತರಣೆ
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಲಾಗಿದೆ. ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!