ಬೀಡಿಯನ್ನು ಅರ್ಧ ಸೇದಿ ಎಸೆದ ತಂದೆ ; ಅದನ್ನೇ ನುಂಗಿದ ಕಂದಮ್ಮ ಸಾ*…..!!!!

ಚಿಕ್ಕ ಮಕ್ಕಳೇ ಹಾಗೆ, ಕೈಗೆ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹೀಗಾಗಿ ಚಿಕ್ಕ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಕಾಳಜಿ ವಹಿಸಿದರೂ ಸಾಲದು. ಆದರೆ ಇಲ್ಲೊಬ್ಬ ತಂದೆಯೂ ಮಾಡಿದ ಎಡವಟ್ಟಿನಿಂದ ಮಗುವಿನ ಪ್ರಾಣಪಕ್ಷಿಯೇ ಹಾರಿ ಹೋಗಿದೆ. ತಂದೆಯೂ ಅರ್ಧ ಸೇದಿ ಎಸೆದ ಬೀಡಿ ತುಂಡನ್ನು ಹತ್ತು ತಿಂಗಳ ಮಗುವು ನುಂಗಿದೆ. ಹಾಗಾದ್ರೆ ಈ ಘಟನೆಯೂ ನಡೆದಿದ್ದು ಎಲ್ಲಿ? ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಚಿಕ್ಕ ಮಕ್ಕಳನ್ನು ಬೆಳೆಸುವುದು ಅಷ್ಟು ಸುಲಭವಲ್ಲ, ಹೌದು ಪುಟಾಣಿ ಮಕ್ಕಳ ಮೇಲೆ ಎಷ್ಟು ಕಣ್ಣಿಟ್ಟರೂ ಸಾಲದು. ಸ್ವಲ್ಪ ಯಾಮಾರಿದ್ರೂ ಕೈಗೆ ಸಿಕ್ಕದೆಲ್ಲವನ್ನು ಬಾಯಿಗೆ ಹಾಕಿಕೊಳ್ಳುತ್ತವೆ. ಈ ಸಣ್ಣ ಮಕ್ಕಳು ನಾಣ್ಯ, ಬಾಟಲಿ ಮುಚ್ಚಳ ನುಂಗಿ ಸಾವನ್ನಪ್ಪಿದ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಇದೀಗ ತಂದೆ ಅರ್ಧ ಸೇದಿ ಎಸೆದ ಬೀಡಿಯನ್ನು ನುಂಗಿ ಹತ್ತು ತಿಂಗಳ ಕಂದಮ್ಮ ಮೃತಪಟ್ಟಿರುವ ಘಟನೆಯೂ ಮಂಗಳೂರಿನ ಅಡ್ಯಾರ್ ನಲ್ಲಿ ನಡೆದಿದೆ.

ಮಗುವೊಂದು ತಂದೆ ಸೇದಿ ಎಸೆದಿದ್ದ ಬೀಡಿಯನ್ನು ನುಂಗಿದ್ದು, ಅಸ್ವಸ್ಥಗೊಂಡಿದ್ದ ಮಗುವನ್ನು ಆ ಕೂಡಲೇ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶನಿವಾರ ಮಧ್ಯಾಹ್ನ 1.25 ರ ವೇಳೆಗೆ ಈ ಘಟನೆ ನಡೆಸಿದ್ದು, ಭಾನುವಾರ ಬೆಳಗ್ಗೆ 10-25 ರ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದೆ ಎಂದು ತಿಳಿದು ಬಂದಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಹತ್ತು ತಿಂಗಳ ಮಗು ಅನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ತಂದೆಯ ಎಡವಟ್ಟು ಮಗುವಿನ ಪ್ರಾಣಕ್ಕೆ ಕುತ್ತು ತಂದಿದೆ. ತನ್ನ ಗಂಡ ಬೀಡಿ ಸೇದಿ, ಮನೆಯಲ್ಲಿ ಅಲ್ಲಲ್ಲಿ ಬಿಸಾಾಡುತ್ತಿದ್ದರು. ಅದನ್ನು ತೆಗೆದು ಕಸದ ಬುಟ್ಟಿಗೆ ಹಾಕಿ ಎಂದು ಹೇಳಿದರೂ ನನ್ನ ಮಾತು ಕೇಳುತ್ತಿರಲಿಲ್ಲ. ಆದರೆ ಇದೀಗ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ನುಂಗಿ ಮಗುವು ಸಾವಿಗೀಡಾಗಿದೆ ಎಂದು ಪತ್ನಿ ಆರೋಪ ಮಾಡಿದ್ದಾರೆ. ಈ ಘಟನೆಗೆ ಸಂಬಂಧ ಪಟ್ಟಂತೆ ಮಗುವಿನ ತಾಯಿ ಲಕ್ಷ್ಮಿದೇವಿ ಮಂಗಳೂರು ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾರೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!