
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಪುರುಷರ ತಂಡದ ಟ್ರೋಫಿ ಬರ ಮುಂದುವರಿದಿತ್ತು. ಈ ಬಾರಿ ರಜತ್ ಪಾಟಿದರ್ ನೇತೃತ್ವದ ಪುರುಷರ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದು ಆರ್‌ಸಿಬಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಮಹಿಳಾ ತಂಡದ ಗೆಲುವು ಮತ್ತು ಪುರುಷರ ತಂಡದ ಗೆಲುವು ಎರಡೂ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಂಭ್ರಮವನ್ನು ತಂದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2025 ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.





