ಮದುವೆ ದಿನವೇ ನವವಧು ಆತ್ಮಹ*!

ಮದುವೆ ಎಂಬುದು ಎಲ್ಲರ ಜೀವನದಲ್ಲೂ ಒಂದು ಸುಂದರವಾದ ಕ್ಷಣವಾಗಿರುತ್ತದೆ. ಆದರೆ ಮದುವೆ ಬಳಿಕ ತವರು ಮನೆಗೆ ಬಂದ ನವವಧು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ಆಂಡಿಪಟ್ಟಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದಕ್ಕೆ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹೌದು, ಈ ಘಟನೆಗೆ ಸಂಬಂಧಪಟ್ಟವರು ತೇಣಿ ಜಿಲ್ಲೆ, ಆಂಡಿಪಟ್ಟಿ ಹತ್ತಿರದ ಕದಿರ್ನರಸಿಂಗಪುರದವರು. ಪರಮೇಶ್ವರನ್ (56). ಸರ್ಕಾರಿ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.ಇವರ ಮಗಳು ಸೌಮ್ಯಾ (24). ಪೆರಿಯಕುಳಂ ಕಾಲೇಜಿನಲ್ಲಿ ಪದವಿ ಮುಗಿಸಿದ್ದಾಳೆ. ಕಂಬಂ ಪುದುಪಟ್ಟಿಯ ರವಿಚಂದ್ರನ್ ಮಗ ಪಾಲಾಜಿ (27) ಜೊತೆ ಸೌಮ್ಯಾಳ ಮದುವೆ ನಿಶ್ಚಯ ಆಗಿತ್ತಂತೆ ಎಂದು ತಿಳಿದು ಬರುತ್ತದೆ.

ನಂತರದಲ್ಲಿ ಮದುವೆ ತಯಾರಿ ಜೋರಾಗಿ ನಡೀತಿತ್ತು. ಆದ್ರೆ ಸೌಮ್ಯಾಗೆ ಈ ಮದುವೆಯಲ್ಲಿ ಇಷ್ಟ ಇರಲಿಲ್ಲವಂತೆ ಅದ್ಯಾಗೂ ಪೋಷಕರು ಜನವರಿ 31 ರಂದು ಕಂಬಂನಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ಮಾಡಿದ್ದಾರೆ.ಅದರಂತೆಯೇ ಮದುವೆ ಮನೆಯವರು ವಧುವನ್ನು ಕದಿರ್ನರಸಿಂಗಪುರಕ್ಕೆ ಕರೆದುಕೊಂಡು ಹೋದರು. ಮನೆಗೆ ಬಂದ ಸೌಮ್ಯಾ ಬಾತ್ರೂಮ್ಗೆ ಹೋಗಬೇಕು ಅಂದ್ರಂತೆ. ಬೆಡ್ರೂಮ್ಗೆ ಹೋದ ಸೌಮ್ಯಾ ಬಾಗಿಲು ಹಾಕಿಕೊಂಡ್ಳು. ಬಾಗಿಲು ತೆಗೆಯದಿದ್ದಾಗ ಮನೆಯವರು ಬಾಗಿಲು ಒಡೆದು ನೋಡಿದಾಗ ಸೌಮ್ಯಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ. ಹೌದು ಇಂತಹದೊಂದು ಆಘಾತಕಾರಿ ಘಟನೆ ನಡೆದಿದೆ.

ಕೂಡಲೇ ಪೊಲೀಸರಿಗೆ ವಿಷಯ ತಿಳಿಸಲಾಯ್ತು. ಸೌಮ್ಯಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯ್ತು. ಪೊಲೀಸರು ತನಿಖೆ ಮಾಡ್ತಿದ್ದಾರೆ. ತನಿಖೆ ವೇಳೆ ತಿಳಿದುಬಂದಿದ್ದು ಏನೆಂದರೆ ಸೌಮ್ಯಾಗೆ ಮದುವೆ ಇಷ್ಟ ಇರಲಿಲ್ಲ, ಆಕೆ ಕನ್ಯಾಸ್ತ್ರೀ ಆಗಿ ಉಳಿಬೇಕು ಅಂದುಕೊಂಡಿದ್ದಳಂತೆ. ಅಂದರೆ ಮದುವೆಯಾಗದೇ ಜೀವನ ಕಳೆಯಬೇಕು ಎಂಬ ಆಸೆ ಇತ್ತಂತೆ ಆದರೆ ಪೋಷಕರು ಮದುವೆ ಮಾಡಿದ ಕಾರಣ ಬೇಸರಗೊಂಡು ಜೀವಕ್ಕೆ ಅಂತ್ಯ ತಂದುಕೊಂಡಿದ್ದಾಳೆಂದು ಹೇಳಲಾಗಿದೆ. ಆದ್ಯಾಗೂ ಪೊಲೀಸರು ಆತ್ಮಹತ್ಯೆಯ ನಿಖರ ಕಾರಣವೇನು ಎಂದು ತಿಳಿಯಲು ತನಿಖೆ ಮುಂದುವರಿಸಿದ್ದಾರೆ. ತನಿಖೆ ಮುಗಿದ ನಂತರವೇ ಎಲ್ಲಾ ಮಾಹಿತಿ ಲಭ್ಯವಾಗುವುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!