ಮಧ್ಯರಾತ್ರಿ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಅಟ್ಟಹಾಸ ಮಾಡಿದ ಇಬ್ಬರ ವಿರುದ್ಧ ಪ್ರಕರಣ ದಾಖಲು ; ಗುಡ್ ನ್ಯೂಸ್ ಫಲಶೃತಿ.

ಮೈಸೂರು :- ರೌಡಿಶೀಟರ್ವೊಬ್ಬ ತಡರಾತ್ರಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಸಹಚರನೊಂದಿಗೆ ಜಗಳವಾಡಿರುವ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದ್ದು, ಈ ಘಟನೆ ಕುರಿತು ಗುಡ್ ನ್ಯೂಸ್ ಕನ್ನಡ ವಾಹಿನಿ ಸುದ್ದಿಯನ್ನ ಮಾಡಿತ್ತು
ಕೆ.ಜಿ.ಕೊಪ್ಪಲು ಸಿದ್ದಪ್ಪಾಜಿ ದೇವಸ್ಥಾನದ ಬಳಿ ನಡುರಸ್ತೆಯಲ್ಲೇ ಲಾಂಗ್ ಹಿಡಿದು ಪ್ರದರ್ಶಿಸಿ, ಭಯದ ವಾತಾವರಣ ಸೃಷ್ಟಿಸಿದ ಆರೋಪದಡಿ ಮೋಹನ್ ಅಲಿಯಾಸ್ ಚಿಂಟು(21) ಹಾಗೂ ಆತನ ಸಹಚರ ರಕ್ಷಿತ್ ಅಲಿಯಾಸ್ ಕೇಕು(21) ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.
ಯುವಕನೊಬ್ಬ ಲಾಂಗ್ ಹಿಡಿದು ಮತ್ತೊಬ್ಬನೊಂದಿಗೆ ಜಗಳವಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ದಲ್ಲಿ ಗಮನಿಸಿದ ಸರಸ್ವತಿಪುರಂ ಠಾಣೆ ಸಿಬ್ಬಂದಿ ಬಸವರಾಜ್ ಅರಸ್, ಈ ಬಗ್ಗೆ ಸ್ಥಳಕ್ಕೆ ತೆರಳಿ ವಿಚಾರಿಸಿ, ವಿಡಿಯೋ ದಲ್ಲಿರುವವರ ಮಾಹಿತಿ ಕಲೆಹಾಕಿದ ನಂತರ
ದೂರು ನೀಡಿದ್ದಾರೆ. ಮಾ.11ರಂದು ತಡರಾತ್ರಿ 11 ಗಂಟೆ ವೇಳೆಯಲ್ಲಿ ಸಿದ್ದಪ್ಪಾಜಿ ದೇವಸ್ಥಾನದ ಬಳಿ ರೌಡಿಶೀಟರ್ ಮೋಹನ್, ಕೈಯ್ಯಲ್ಲಿ ಲಾಂಗ್ ಹಿಡಿದು ಸಾರ್ವಜನಿಕ ವಾಗಿ ಪ್ರದರ್ಶಿಸಿ ಭಯದ ವಾತಾವರಣ ಸೃಷ್ಟಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಲಾಂಗ್ ಹಿಡಿದಿರುವ ಯುವಕನನ್ನು ಮತ್ತೊಬ್ಬ ಸಮಾಧಾನಪಡಿಸುವಂತೆ ಕಂಡು ಬಂದಿದೆ. ಕೆಲ ಹೊತ್ತಿನ ಬಳಿಕ ಮೂರಾಲ್ಕು ಮಂದಿ ಬಂದು ದೂರದಿಂದಲೇ ಜಗಳ ನೋಡುತ್ತಿ ರುತ್ತಾರೆ. ರೈಲ್ವೆ ಗೇಟ್ ಬಂದ್ ಮಾಡಿದ್ದ ರಿಂದ ಒಂದು ಕಾರು, ಬೈಕ್ ಅಲ್ಲಿಯೇ ನಿಂತಿ ರುತ್ತವೆ. ಅನೇಕ ವಾಹನಗಳು ಇಲ್ಲೇ ಹಾದುಹೋಗುತ್ತವೆ ಆದರೆ ಯಾರಿಗೂ ಲಾಂಗ್ ತೋರಿಸಿ, ಹೆದರಿಸಿದಂತೆ ಕಾಣಿಸುವುದಿಲ್ಲ.
ಸದ್ಯ ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಸಾರ್ವಜನಿಕವಾಗಿ ಲಾಂಗ್ ಝಳಪಿಸಿ ಭಯದ ವಾತಾವರಣ ಸೃಷ್ಟಿಸಿದವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!