ವಾಲ್ಮೀಕಿ ನಿಗಮದಲ್ಲಿ 89 ಕೋಟಿ ಹಣ ವರ್ಗಾವಣೆ ಆರೋಪ ಸಂಬಂಧ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ED ಅನುಮತಿ ಕೋರಿತ್ತು. ಇದೀಗ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ಕೋರ್ಟ್ ಅನುಮತಿ ನೀಡಿದೆ. ತನಿಖೆ ವೇಳೆ ED ಅಧಿಕಾರಿಗಳು ನಾಗೇಂದ್ರರನ್ನ ಅರೆಸ್ಟ್ ಮಾಡಿದ್ದು, ಈ ಹಗರಣ ಕೇಸಲ್ಲಿ ನಾಗೇಂದ್ರ ಜೈಲು ಸೇರಿದ್ದರು. ನಂತರ ಜಾಮೀನು ಮೇಲೆ ಹೊರ ಬಂದಿದ್ದ ನಾಗೇಂದ್ರಗೆ ತನಿಖೆ ಶಾಕ್ ನೀಡಿತ್ತು.

ಪ್ರಕರಣದ ಹಿನ್ನೆಲೆ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಬಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 89 ಕೋಟಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಮತ್ತಿತರರ ವಿರುದ್ಧ ಇಸಿಐಆರ್ ದಾಖಲಿಸಿ ತನಿಖೆ ಕೈಗೊಂಡಿತ್ತು. ಈ ಹಗರಣ ಕೇಸಲ್ಲಿ ಮಾಜಿ ಸಚಿವ ನಾಗೇಂದ್ರರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು.





