ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಲಗಾಮು, ಸುಗ್ರೀವಾಜ್ಞೆಗೆ ರಾಜ್ಯ ಸಂಪುಟ ಅನುಮೋದನೆ.

ಬೆಂಗಳೂರು :-ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಲಗಾಮು ಹಾಕುವ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಸುಗ್ರೀವಾಜ್ಞೆಯನ್ನು ಯಾವ ರೀತಿ ಜಾರಿಗೊಳಿಸಬೇಕೆಂಬ ಅಧಿಕಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ.
ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. ಪಾಟೀಲ್, ಸುಗ್ರೀವಾಜ್ಞೆಯಲ್ಲಿ ಸಾಲಗಾರರ ಹಿತ ಕಾಪಾಡುವ ಅಂಶಗಳನ್ನು ಅಳವಡಿಸಲಾಗಿದೆ.
ಆದರೆ, ಇದರಲ್ಲಿ ಸಣ್ಣ-ಪುಟ್ಟ ಲೋಪ ದೋಷಗಳಿವೆ ಎಂದು ಕಾನೂನು ಮತ್ತು ಆರ್ಥಿಕ ಇಲಾಖೆ ಸಲಹೆ ಹಿನ್ನೆಲೆಯಲ್ಲಿ ಸಂಪುಟ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿ, ಇರುವ ಸಣ್ಣ-ಪುಟ್ಟ ಲೋಪದೋಷಗಳನ್ನು ಬಗೆಹರಿಸಿ ಜಾರಿಗೆ ತರುವ ಅಧಿಕಾರವನ್ನು ಮುಖ್ಯಮಂತ್ರಿ ಅವರಿಗೆ ನೀಡಿದೆ. ಅವರು, ಹಣಕಾಸು, ಕಾನೂನು, ಕಂದಾಯ, ಗೃಹ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಕಾಯ್ದೆಗೆ ಒಂದು ರೂಪ ನೀಡಲಿದ್ದಾರೆ ಎಂದರು.
ಜಲ ಭದ್ರತೆಗೆ 5000 ಕೋಟಿ ಬೃಹತ್ ಯೋಜನೆ: ಸತತ ಬರಗಾಲಕ್ಕೆ ತುತ್ತಾಗುವ ಕರ್ನಾಟಕವನ್ನು ಪಾರು ಮಾಡಲು ಜಲ ಭದ್ರತೆಗಾಗಿ 5,000 ಕೋಟಿ ರೂ.ಗಳ ಬೃಹತ್ ಯೋಜನೆಗೆ ಸಂಪುಟ ಹಸಿರು ನಿಶಾನೆ ತೋರಿದೆ. ವಿಶ್ವಬ್ಯಾಂಕ್ ನಿಂದ 3,500 ಕೋಟಿ ರೂ. ಸಾಲ ಪಡೆದು ಅದಕ್ಕೆ ಸರಿಸಮನಾಗಿ ರಾಜ್ಯ ಸರ್ಕಾರ 1,500 ಕೋಟಿ ರೂ. ಒದಗಿಸಿ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ. ಮಳೆಗಾಲದಲ್ಲಿ ಹೆಚ್ಚುವರಿಯಾಗಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ತಡೆದು ಅಣೆಕಟ್ಟೆ, ಚೆಕ್‌ಡ್ಯಾಂ ನಿರ್ಮಾಣ ಮತ್ತು ಕೆರೆ ತುಂಬಿಸುವುದು ಇದರ ಉದ್ದೇಶವಾಗಿದೆ.

ಬೆಂಗಳೂರು ಅರಮನೆ ಮೈದಾನ ಜಾಗ ಬಳಕೆ ಮತ್ತು ನಿಯಂತ್ರಣಕ್ಕೆ ಕಳೆದ ಸಂಪುಟ ಸಭೆಯಲ್ಲಿ ಹೊರಡಿಸಿದ ಸುಗ್ರೀವಾಜ್ಞೆ ಅನುಷ್ಠಾನಕ್ಕೆ ಸಂಪುಟ ಸಮ್ಮತಿಸಿದೆ. ರಾಜಧಾನಿ ಹೊರವಲಯದ ಹೆಸರ ಘಟ್ಟದ 5,678 ಎಕರೆ ಪ್ರದೇಶವನ್ನು ವನ್ಯ ಜೀವಿ ಸಂರಕ್ಷಣಾ ನಿಯಮದಡಿ ಮೀಸಲು ಪ್ರದೇಶ ಎಂದು ಘೋಷಣೆ ಮಾಡಲಾಗಿದೆ.
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಕಟ್ಟಡಗಳನ್ನು 304 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಕ್ಕೆ ಅನುಮತಿ ನೀಡ ಲಾಗಿದೆ. ಸರ್ಕಾರದಿಂದ ನೇರವಾಗಿ ಮತ್ತು ಪರೋಕ್ಷವಾಗಿ ನೇಮಕಗೊಂಡಿರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ವ್ಯವಸ್ಥೆ ಜಾರಿಗೆ ತರಲು ತೀರ್ಮಾನಿಸಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!