ಮೈಸೂರು ಜಿಲ್ಲೆಯಲ್ಲಿ ಹಕ್ಕಿಜ್ವರಕ್ಕೆ ತೀವ್ರ ಕಟ್ಟೆಚ್ಚರ.

ಮೈಸೂರು :- ರಾಜ್ಯದ ವಿವಿಧೆಡೆ ಹಕ್ಕಿಜ್ವರ ಕಾಣಿಸಿಕೊಂಡಿರುವ ಹಚ್ಚಿ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಇದು ವರೆಗೂ ಯಾವುದೇ ಪ್ರಕರಣ ವರದಿಯಾಗಿ ಲ್ಲದೇ ಇದ್ದರೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ ಹಕ್ಕಿಜ್ವರ ಹರ ಡುವಿಕೆ ತಡೆಗೆ ಸೂಕ್ತ ಕ್ರಮ ಕೈಗೊಂಡಿದೆ. ಪ್ರತಿ ವರ್ಷದಂತೆ ಕೇರಳದಲ್ಲಿ ಹಕ್ಕಿಜ್ವರ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಗಡಿ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್‌ ಪೋಸ್ಟ್‌ನಲ್ಲಿ ಕೋಳಿ ಸಾಗಾಣಿಕೆ ವಾಹನಗಳ ತಪಾ ಸಣೆ ನಡೆಸಲಾಗುತ್ತಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆ ಜಾಗೃತ ತಂಡ ರಚಿಸಿದ್ದು, ಕೋಳಿ ಸಾಕಣೆದಾರರಿಗೆ ಅರಿವು ಮೂಡಿಸುತ್ತಿದೆ. ಎಲ್ಲಾ ಕೋಳಿ ಸಾಕಣೆ ಕೇಂದ್ರಗಳು, ರೈತರ ಮನೆಗಳು, ಗ್ರಾಮಗಳಿಗೆ ಭೇಟಿ ನೀಡಿ ಕರಪತ್ರ ಹಂಚಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಾಗೃತಿ ಮೂಡಿಸಲಾಗುತ್ತಿದೆ.

ಯಾವುದೇ ಪಕ್ಷಿ ಅಥವಾ ಕೋಳಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರು ವುದು ಗಮನಕ್ಕೆ ಬಂದರೆ ಪಶುಸಂಗೋ ಪನಾ ಇಲಾಖೆಯ ಗಮನಕ್ಕೆ ತರುವಂತೆ ರೈತರಿಗೆ ಮಾಹಿತಿ ನೀಡಲಾಗುತ್ತಿದೆ. ಕೋಳಿ ಸಾಕಣೆ ಕೇಂದ್ರ ಮತ್ತು ಮಾಂಸ ಸಂಸ್ಕ ರಣೆ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹಕ್ಕಿಜ್ವರದ ಸೋಂಕು ತಗಲುವ ಸಾಧ್ಯತೆ ಇರುವುದರಿಂದ ಜಾಗೃತರಾಗಿರುವಂತೆ ತಿಳಿಸಲಾಗುತ್ತಿದೆ. ಕೋಳಿ ಸಾಗಣೆ ಮಾಡುವ
ವಾಹನಗಳಿಗೆ ಔಷಧಿ ಸಿಂಪಡಿಸಿ ಶುಚಿಗೊಳಿಸಲು ಸೂಚನೆ ನೀಡಲಾಗಿದೆ.
ರೋಗದ ಲಕ್ಷಣಗಳು: ಮನುಷ್ಯರಲ್ಲಿ ಸಾಮಾನ್ಯ ಜ್ವರದ ಲಕ್ಷಣ ಕಾಣಿಸಿಕೊಳ್ಳುತ್ತವೆ. ತೀವ್ರ ಜ್ವರ, ಭೇದಿ, ಹೊಟ್ಟೆನೋವು, ಮೂಗು, ವಸಡಿನಲ್ಲಿ ರಕ್ತ ಸ್ರಾವ, ಚಳಿಯ ಅನುಭವ, ತಲೆ ನೋವು, ಮೈ-ಕೈ ನೋವು, ಕೆಮ್ಮು, ಉಸಿರಾಟ ತೊಂದರೆ, ಗಂಟಲು ನೋವು, ಕೆಂಗಣ್ಣು ಬಾಧಿಸುತ್ತದೆ. ಈ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು.
ಕೋಳಿಗಳಲ್ಲಿ ಸೋಂಕಿನ ಲಕ್ಷಣಗಳು ತಕ್ಷಣಕ್ಕೆ ಕಾಣಿಸಿಕೊಳ್ಳುವುದಿಲ್ಲ. ಅವು ಬಹು ಬೇಗ ಹರಡುವುದರಿಂದ ರೋಗ ಪತ್ತೆ ಕಷ್ಟ ಸಾಮಾನ್ಯವಾಗಿ ಸೋಂಕಿತ ಕೋಳಿಗಳು ಆಹಾರ ತಿನ್ನುವುದಿಲ್ಲ. ಮೊಟ್ಟೆ ಉತ್ಪಾದನೆ ಕಡಿಮೆಯಾಗುತ್ತದೆ. ಹೆಚ್ಚು ಓಡಾಡು ವುದಿಲ್ಲ. ಕಣ್ಣುಗಳು ತೇವಗೊಂಡಿರುತ್ತವೆ. ರೆಕ್ಕೆಗಳು ಕೆದರಿರುತ್ತವೆ. ತಲೆ ಭಾಗ ಊದಿ ಕೊಳ್ಳುತ್ತದೆ. ಕಾಲಿನ ಚರ್ಮದ ಅಡಿಯಲ್ಲಿ ರಕ್ತಸ್ರಾವವೂ ಕಾಣಿಸಿಕೊಳ್ಳಬಹುದು. ದಿಢೀರ್ ಸಾವು ಸಂಭವಿಸುತ್ತದೆ.

ಹಕ್ಕಿ ಜ್ವರ ಹೇಗೆ ಹರಡುತ್ತದೆ: ಹಕ್ಕಿ ಜ್ವರದ ವೈರಸ್ ಪಕ್ಷಿಗಳಿಂದ ಪಕ್ಷಿಗಳಿಗೆ ಹರಡುತ್ತದೆ. ಪಕ್ಷಿಗಳು ವಲಸೆ ಹೋದಾಗ, ಗುಂಪಿನಲ್ಲಿ ಸೋಂಕಿತ ಪಕ್ಷಿ ಇದ್ದರೆ ಹೋದ ಸ್ಥಳದಲ್ಲಿರುವ ಎಲ್ಲಾ ಪಕ್ಷಿಗಳಿಗೂ ಸುಲಭವಾಗಿ ಹರಡುತ್ತದೆ. ಸೋಂಕಿತ ಕೋಳಿ ಅಥವಾ ಪಕ್ಷಿಗಳೊಂದಿಗೆ ನೇರ ಸಂಪರ್ಕಕ್ಕೆ ಬಂದ ಜನರು ಮತ್ತು ಪ್ರಾಣಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ. ಈ ವೈರಸ್ ತೇವ ಅಥವಾ ಒಣಗಿದ ಗೊಬ್ಬರದಲ್ಲಿ 8 ವಾರಗಳ ವರೆಗೂ ಜೀವಿಸುವ ಸಾಮರ್ಥ್ಯ ಹೊಂದಿದೆ. ಸೋಂಕಿತ ಪಕ್ಷಿ, ಪ್ರಾಣಿಗಳ ನೇರ ಸಂಪರ್ಕಕ್ಕೆ ಬಂದರೆ, ಕೈಯನ್ನು ಸಾಬೂನಿ ನಿಂದ ತೊಳೆದು ಸ್ವಚ್ಛಗೊಳಿಸುವುದರ ಮೂಲಕ ಈ ವೈರಸ್ ಮನುಷ್ಯನಿಗೆ ಹರಡುವುದನ್ನು ತಡೆಯಬಹುದು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!