
ಮನುಷ್ಯನ ಸ್ವಾರ್ಥದಿಂದ ಕಾಡು ಸಂಪೂರ್ಣವಾಗಿ ನಾಶವಾಗಿದೆ. ಈ ಕಾಡಿನ ವಿನಾಶದಿಂದ ಅರಣ್ಯದಲ್ಲಿನ ಪ್ರಾಣಿಗಳೆಲ್ಲಾ ಆಹಾರವನ್ನರಸುತ್ತಾ ನಾಡಿನ ಕಡೆಗೆ ಬರುವುದು ಹೊಸದೇನಲ್ಲ. ಹೀಗೆ ಆಹಾರವನ್ನರಸುತ್ತಾ ಬರುವ ಈ ಪ್ರಾಣಿಗಳು ಜನರು, ಶ್ವಾನ ಮತ್ತು ದನಕರುಗಳ ಮೇಲೆ ದಾಳಿ ಮಾಡುತ್ತವೆ. ಆದರೆ ಇದೀಗ ಎದೆ ಝಲ್ ಎನಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್ಪಾತ್ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲೇ ರಾಜಾರೋಷವಾಗಿ ಸಿಂಹಿಣಿಯೊಂದು ನಡೆದುಕೊಂಡು ಹೋಗಿದೆ. ಈ ಬಗ್ಗೆ ಅರಿವಿಲ್ಲದೇ ವ್ಯಕ್ತಿಯೂ ಗಾಢ ನಿದ್ರೆಯಲ್ಲಿ ಮುಳುಗಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಆಗಿರುವ ಈ ವಿಡಿಯೋಗೆ ಹಲವಾರು ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದು ಎಐನಿಂದ ರಚಿಸಲಾದ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ಆ ವ್ಯಕ್ತಿಯೂ ಈ ವಿಡಿಯೋ ನೋಡಿದರೆ ಇನ್ನು ಜನ್ಮದಲ್ಲಿಯೂ ಈ ಪುಟ್ ಪಾತ್ ನಲ್ಲಿ ಮಲಗುವ ಸಾಹಸಕ್ಕೆ ಕೈ ಹಾಕಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರ, ಈ ಸ್ಥಳ ಗುಜರಾತ್ ಆಗಿರಬೇಕು, ಅಲ್ಲಿ ಇಂತಹ ದೃಶ್ಯಗಳು ಆಗಾಗ ಕಾಣಸಿಗುತ್ತದೆ ಎಂದಿದ್ದಾರೆ.





