ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!

ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವ‌ರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.
ಪ್ರಧಾನಮಂತ್ರಿಯವರು ಈ ಆರೋಪ ವನ್ನು ಗಂಭೀರವಾಗಿಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆರೋಪ ಮಾಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಸ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದು ಮಾತ್ರ ವಲ್ಲ ಇದಕ್ಕಾಗಿ ವೊಡ್ಡಿದ್ದರು. ನಾನು 150 ಕೋಟಿ ರೂ. ಆಮಿಷ ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲಾ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.


‘ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಕ್ಸ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನು ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಸ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದ ಕಾಲದಲ್ಲಿಯೇ ವಕ್ಸ್ ಆಸ್ತಿಗೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮ ಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪಾಡಿ ಅವರ ಬಾಯಿ ಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ, ಎಕ್ಸ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ. ಆಶ್ಚರ್ಯದ ಸಂಗತಿ ಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂ. ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರ ದಿಂದ ಹಿಡಿದು ವಕ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿ ಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!