ವರನ ಕೆಲಸ, ಕುಟುಂಬದ ಹಿನ್ನಲೆ ಜೊತೆಗೆ, ಡಿಜಿಟಲ್ ಹಿನ್ನಲೆಯನ್ನೂ ನೋಡಿ ಎಂದ ಯುವತಿ….

ಈಗಿನ ಕಾಲದಲ್ಲಿ ಯುವತಿಯರು ಮದುವೆ ವಿಷಯದಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಸುಳ್ಳು ಹೇಳಿ ಮದುವೆ ಮಾಡಿಕೊಂಡು ಮೋಸ ಮಾಡುವ ಸುದ್ದಿಗಳನ್ನು ನೀವು ಆಗಾಗ ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವತಿಯೂ ತನ್ನ ಬುದ್ಧಿವಂತಿಕೆಯಿಂದ ಅಪಾಯಕಾರಿ ಪುರುಷನಿಂದ ಹೇಗೆ ತಪ್ಪಿಸಿಕೊಂಡೆ ಹಾಗೂ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ವರನ ಡಿಜಿಟಲ್ ಹಿನ್ನಲೆಯ ಬಗ್ಗೆ ತಿಳಿದುಕೊಳ್ಳುವುದು ಎಷ್ಟು ಮುಖ್ಯ ಎನ್ನುವುದನ್ನು ಒತ್ತಿ ಹೇಳಿದ್ದಾರೆ. ಯುವತಿಯ ಪೋಸ್ಟ್ವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈಕೆ ನೀಡಿದ ಸಲಹೆಯನ್ನು ಸ್ವೀಕರಿಸಿದ್ದಾರೆ.

ಈಗಿನ ಕಾಲದಲ್ಲಿ ಯಾರು ಹೇಗೆ ಇರುತ್ತಾರೆ ಎಂದು ಹೇಳುವುದೇ ಕಷ್ಟ. ಎದುರುಗಡೆಯಿಂದ ನೋಡಲು ಒಳ್ಳೆಯವರಂತೆ ಕಂಡರೂ ಕೆಟ್ಟ ಗುಣನಡತೆಯನ್ನು ಹೊಂದಿರಬಹುದು. ಅದರಲ್ಲಿಯೂ ಮದುವೆಯಾಗುವ ಮುನ್ನ ಹುಡುಗನೇ ಆಗಿರಲಿ, ಹುಡುಗಿಯೇ ಇರಲಿ, ಜೀವನ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಯ ಕುಟುಂಬ ಹಾಗೂ ಉದ್ಯೋಗದ ಹಿನ್ನಲೆಯನ್ನು ಪರಿಶೀಲಿಸುವುದು ಮಾತ್ರವಲ್ಲ, ಡಿಜಿಟಲ್ ಹಿನ್ನಲೆಯನ್ನು ಗಮನಿಸಬೇಕಂತೆ. ಇಲ್ಲದಿದ್ದರೆ ಗೊತ್ತಿಲ್ಲದೇ ಯಾಮಾರುವುದು ಗ್ಯಾರಂಟಿಯಂತೆ. ಈ ಬಗ್ಗೆ 22 ವರ್ಷದ ಯುವತಿಯೊಬ್ಬಳು ಮಾಡಿದ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾಳೆ. ತಾನು ಹೇಗೆ ಅಪಾಯಕಾರಿ ಮದುವೆಯಿಂದ ಪಾರಾದೆ ಎನ್ನುವ ಬಗ್ಗೆ ವಿವರಿಸಿದ್ದು ಈ ಪೋಸ್ಟ್ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ರೆಡ್ಡಿಟ್ ಖಾತೆಯಲ್ಲಿ ಯುವತಿಯೂ ಶೇರ್ ಮಾಡಿದ ಪೋಸ್ಟ್ನಲ್ಲಿ, 2025ರಲ್ಲಿ ಅರೇಂಜ್ಡ್ ಮ್ಯಾರೇಜ್: ಹುಡುಗಿಯರು ಡಿಜಿಟಲ್ ಹಿನ್ನೆಲೆ ಪರಿಶೀಲನೆ ಮಾಡಬೇಕಾದ ಅಗತ್ಯ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾಳೆ. ಈ ಪೋಸ್ಟ್ನಲ್ಲಿ, ನಾನು ಎಲ್ಲವನ್ನೂ ಪರಿಶೀಲಿಸಿದೆ. ಕೆಲವು ಉತ್ತಮ ಸ್ಥಾನದಲ್ಲಿರುವ ಪುರುಷರು ಎಷ್ಟು ಅಪಾಯಕಾರಿ ಎಂಬುದು ನನಗೆ ಚೆನ್ನಾಗಿ ಅರಿವಾಯಿತು. ಸಾಮಾನ್ಯವಾಗಿ ಹೆಚ್ಚಿನ ಹುಡುಗಿಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕಲಿಯುವುದಕ್ಕಾಗಿ ನಾನು ಈ ವಿಚಾರವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಆಕೆ ಬರೆದುಕೊಂಡಿದ್ದಾಳೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!