ವಿದ್ಯುತ್ ಉತ್ಪಾದನೆ ಹೆಚ್ಚಳ: ಮೂರನೇ ಕ್ರಮಾಂಕಕ್ಕೇರಿದ ಭಾರತ….

ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳದ ಪ್ರಾಧಾನ್ಯತೆಯನ್ನು ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು ರೆಸಿಡೆನ್ಷಿಯಲ್ ಸ್ಥಳ, ಎಸಿ, ಗೃಹೋಪಕರಣ, ಕೈಗಾರಿಕೆಗಳು ವಿದ್ಯುತ್ಗೆ ಬೇಡಿಕೆ ಹೆಚ್ಚಿಸಿವೆ ಎಂದು ಹೇಳಲಾಗ್ತಾ ಇದೆ.

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಸಾಂಪ್ರದಾಯಿಕವಾಗಿ ಕಲ್ಲಿದ್ದಲು ಮೂಲವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರವು ಪರ್ಯಾಯ ಮತ್ತು ಸ್ವಚ್ಛ ಇಂಧನ ಉತ್ಪಾದನೆಗೆ ಒತ್ತು ಕೊಡುತ್ತಿದೆ. ಅದರಲ್ಲೂ ಸೌರ ವಿದ್ಯುತ್ ಉತ್ಪಾದನೆ ಗಣನೀಯವಾಗಿ ಹೆಚ್ಚುತ್ತಿದೆ. ಐಇಎ ವರದಿ ಪ್ರಕಾರ ಕಳೆದ ಐದು ವರ್ಷದಲ್ಲಿ ಭಾರತದಲ್ಲಿ ಸ್ವಚ್ಛ ಇಂಧನ ಕ್ಷೇತ್ರದಲ್ಲಿ ಮಾಡಲಾಗಿರುವ ಹೂಡಿಕೆಯಲ್ಲಿ ಅರ್ಧಕ್ಕಿಂತ ಹೆಚ್ಚಿನ ಮೊತ್ತವು ಸೌರಶಕ್ತಿ ಉತ್ಪಾದನೆಗೆ ವಿನಿಯೋಗ ಆಗಿದೆ. 2024ರಲ್ಲಂತೂ ವಿದ್ಯುತ್ ಕ್ಷೇತ್ರದಲ್ಲಿನ ಶೇ. 83ರಷ್ಟು ಹೂಡಿಕೆಯು ಸ್ವಚ್ಛ ಇಂಧನ ತಯಾರಿಕೆಗೆ ಹೋಗಿದೆ.


ಅತಿಹೆಚ್ಚು ವಿದ್ಯುತ್ ಉತ್ಪಾದಿಸುವ ದೇಶಗಳು (2023ರ ದತ್ತಾಂಶ)
ಚೀನಾ: 9,456 ಟಿಡಬ್ಲ್ಯುಎಚ್ (ಟೆರಾ ವ್ಯಾಟ್ ಅವರ್)
ಅಮೆರಿಕ: 4,254 TWh
ಭಾರತ: 1,958 TWh
ರಷ್ಯಾ: 1,178 TWh
ಜಪಾನ್: 1,013 TWh
ಬ್ರೆಜಿಲ್: 710 TWh
ಕೆನಡಾ: 633 TWh
ಸೌತ್ ಕೊರಿಯಾ: 618 TWh
ಫ್ರಾನ್ಸ್: 518 TWh
ಜರ್ಮನಿ: 497 TWh


ಈ ಮೇಲಿನ ಅಂಕಿ ಅಂಶವು ಒಟ್ಟಾರೆ ವಿದ್ಯುತ್ ಉತ್ಪಾದನೆಯ ಲೆಕ್ಕ ಹೇಳುತ್ತದೆ. ಇದರಲ್ಲಿ ಕಲ್ಲಿದ್ದಲು, ಜಲವಿದ್ಯುತ್, ಪರಮಾಣು, ಸೌರಶಕ್ತಿ, ವಾಯುಶಕ್ತಿ, ಜೈವಿಕ ಇಂಧನ ಇತ್ಯಾದಿ ಎಲ್ಲಾ ಶಕ್ತಿಮೂಲಗಳಿಂದ ಉತ್ಪಾದಿಸಲಾಗುವ ವಿದ್ಯುತ್ ಆಗಿದೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!