ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊಲೆ
ಪ್ರೀತಿಸಿ ಮದುವೆಯಾದ ಸುಂದರ ಹೆಂಡ್ತಿಯ ಶೀಲ ಶಂಕಿಸಿ ಚೇರ್ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ
ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಯುವತಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಳು.
ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಕಟ್ಟಿಕೊಂಡ ಗಂಡನೇ ತನ್ನ ಹೆಂಡತಿಯನ್ನು ಮಹಿಳೆಯ ಭೀಕರ ಹತ್ಯೆ ಮಾಡಿರುವ ದುರ್ಘನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ (25) ಎಂದು ಗುರುತಿಸಲಾಗಿದೆ.
ಕೊಲೆ ಮಾಡಿದ ವ್ಯಕ್ತಿಯನ್ನು ಈಕೆಯ ಗಂಡ ಕಿರಣ್ ಎಂದು ಹೇಳಲಾಗಿದೆ. ಕಿರಣ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು, ನೀನು ಯಾರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೀಯ ಹೇಳು ಎಂದು ಕೇಳಿದ್ದಾನೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊಲೆ ಮಾಡಿದ್ದು, ಸಂಜೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.
ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡಿದ್ದಾನೆ.
ವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವಳಾದ ನವ್ಯಾ ಕಿರಣ್ನನ್ನು ಪ್ರೀತಿಸಿ ಮದುವೆಯಾದ ನಂತರ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಆದರೆ, ಈಗ ಗಂಡನಿಂದಲೇ ಭೀಕರವಾಗಿ, ಚಿತ್ರಹಿಂಸೆ ಅನುಭವಿಸಿ ಪ್ರಾಣ ಬಿಟ್ಟಿದ್ದಾಳೆ. ಇನ್ನು ಘಟನೆ ತಿಳಿದ ಬಳಿಕ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ







