ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊ*

ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊಲೆ

 

ಪ್ರೀತಿಸಿ ಮದುವೆಯಾದ ಸುಂದರ ಹೆಂಡ್ತಿಯ ಶೀಲ ಶಂಕಿಸಿ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ

ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಯುವತಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಳು.

ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಕಟ್ಟಿಕೊಂಡ ಗಂಡನೇ ತನ್ನ ಹೆಂಡತಿಯನ್ನು ಮಹಿಳೆಯ ಭೀಕರ ಹತ್ಯೆ ಮಾಡಿರುವ ದುರ್ಘನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ (25) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿದ ವ್ಯಕ್ತಿಯನ್ನು ಈಕೆಯ ಗಂಡ ಕಿರಣ್ ಎಂದು ಹೇಳಲಾಗಿದೆ. ಕಿರಣ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು, ನೀನು ಯಾರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೀಯ ಹೇಳು ಎಂದು ಕೇಳಿದ್ದಾನೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊಲೆ ಮಾಡಿದ್ದು, ಸಂಜೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡಿದ್ದಾನೆ.
ವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವಳಾದ ನವ್ಯಾ ಕಿರಣ್‌ನನ್ನು ಪ್ರೀತಿಸಿ ಮದುವೆಯಾದ ನಂತರ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಆದರೆ, ಈಗ ಗಂಡನಿಂದಲೇ ಭೀಕರವಾಗಿ, ಚಿತ್ರಹಿಂಸೆ ಅನುಭವಿಸಿ ಪ್ರಾಣ ಬಿಟ್ಟಿದ್ದಾಳೆ. ಇನ್ನು ಘಟನೆ ತಿಳಿದ ಬಳಿಕ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ

 

  • Related Posts

    ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

    ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

    ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!