ಸಾವಿನಲ್ಲೂ ಸಾರ್ಥಕತೆ ಮೆರೆದ ಕಾನ್‌ ಸ್ಟೇಬಲ್

ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಪೊಲೀಸ್‌ ಠಾಣೆ ಕಾನ್‌ಸ್ಟೆಬಲ್ ಹರೀಶ್ (28) ಎಂಬುವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕು ಗಾಯನಹಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಬುಧವಾರ ಮಾಣಿ-ಮೈಸೂರು ರಸ್ತೆಯ, ಸುಳ್ಯ ತಾಲೂಕಿನ ಅರಂತೋಡು ಬಳಿ ಅವರು ಚಲಾಯಿಸುತ್ತಿದ್ದ ಬೈಕ್ ಅಪಘಾತವಾಗಿ ತಲೆಗೆ ಗಂಭೀರ ಸ್ವರೂಪದಲ್ಲಿ ಗಾಯವಾಗಿತ್ತು. ಮಿದುಳು ನಿಷ್ಕ್ರಿಯಗೊಂಡಿರುವ ಹರೀಶ್ ಅವರ ಅಂಗಾಂಗ ದಾನ ಬಗ್ಗೆ ವೈದ್ಯರು ಮನೆಯವರಿಗೆ ಸಲಹೆ ನೀಡಿದರು. ಅದಕ್ಕೆ ಸಹೋದರ ಗಿರೀಶ್, ತಂದೆ ಲಿಂಗದೇವರು, ತಾಯಿ ರೇಣುಕಾ ಸಮ್ಮತಿ ಸೂಚಿಸಿದ್ದು, ಕಣ್ಣು, ಲಿವರ್, ಕಿಡ್ನಿ ಮೊದಲಾದ ಅಂಗಾಂಗಳನ್ನು ದಾನ ಮಾಡಲಾಯಿತು.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!