ಸಿಎಂ ಎಲ್ಲಾ ವರ್ಗಗಳಿಗೂ ಸಮತೋಲಿತ ಬಜೆಟ್ ಮಂಡನೆ; ಡಾ. ಪುಷ್ಪಾ ಅಮರನಾಥ್ .

ಮೈಸೂರು :- ಸಿಎಂ ಸಿದ್ದರಾಮಯ್ಯ ಎಲ್ಲಾ ವರ್ಗಗಳಿಗೂ ಅನುಕೂಲವಾಗುವಂತೆ ಸಮತೋಲಿತ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ತಿಳಿಸಿದರು.
ಜಿಲ್ಲಾ ಪಂಚಾಯತ್ ನ ಡಿ.ದೇವರಾಜ ಅರಸು ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಪುಷ್ಪಾ ಅಮರನಾಥ್, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಅನ್ನು ಪ್ರತಿಪಕ್ಷ ಬಿಜೆಪಿ ನಾಯಕರು ಇದು ಹಲಾಲ್ ಬಜೆಟ್, ಮುಸ್ಲಿಂ ಬಜೆಟ್ ಎಂದು ಟೀಕಿಸುತ್ತಿದ್ದಾರೆ. ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಮರು ಮಾತ್ರವಲ್ಲ. ಜೈನ, ಸಿಖ್, ಬೌದ್ಧ ಸೇರಿದಂತೆ ಇನ್ನಿತರ ಅಲ್ಪಸಂಖ್ಯಾತ ಸಮುದಾಯಗಳು ಸೇರಿವೆ. ಆದರೂ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಜನಪರ ಬಜೆಟ್ ಸಹಿಸಲಾರದೇ ಹೊಟ್ಟೆಕಿಚ್ಚಿನಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಗ್ಯಾರಂಟಿ ಸಮಿತಿ ರಚನೆಯಿಂದ ಶಾಸಕರ ಅಧಿಕಾರ ಮೊಟಕಾಗಿಲ್ಲ.
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸಮಿತಿ ರಚಿಸಿರುವುದಕ್ಕೆ ವಿಪಕ್ಷಗಳ ಆಕ್ಷೇಪ, ಕೆಲವು ಶಾಸಕರಿಂದ ತೀವ್ರ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಪುಷ್ಮಾ ಅಮರನಾಥ್, ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಲು ಸಮಿತಿಯ ಅವಶ್ಯಕತೆ ಇದೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಕೇವಲ ಅಧಿಕಾರಿಗಳಿಂದ ಮಾತ್ರ ಸಾಧ್ಯವಿಲ್ಲ. ಹಾಗಾಗಿ ಸಮಿತಿಗಳ ಅವಶ್ಯಕತೆ ಇದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಮಿತಿ ಇರುವುದರಿಂದ ಜನರಿಗೆ ಯೋಜನೆಗಳನ್ನು ತಲುಪಿಸಲು ಸಾಧ್ಯವಾಗುತ್ತಿದೆ. ಇಡೀ ರಾಜ್ಯಕ್ಕೆ ಕೇವಲ ಹದಿನೈದು ಜನರ ಸಮಿತಿಯನ್ನು ಮಾತ್ರ ರಚನೆ ಮಾಡಲಾಗಿದೆ. ನಮಗೇನು ಸರ್ಕಾರ ಸಂಬಳ ಕೊಡುತ್ತಿಲ್ಲ. ಕೇವಲ ಗೌರವ ಧನ ಕೊಡುತ್ತಿದ್ದು, ಬೇರೆ ಯಾವುದೇ ಸವಲತ್ತುಗಳನ್ನು ಕೊಡುತ್ತಿಲ್ಲ. ಗ್ಯಾರಂಟಿ ಸಮಿತಿ ರಚನೆಯಿಂದ ಶಾಸಕರ ಅಧಿಕಾರ ಮೊಟಕಾಗಿಲ್ಲ. ಇದರಿಂದ ಶಾಸಕರಿಗೇ ಅನುಕೂಲವಾಗಿದೆ. ನಾವು ಯಾವುದೇ ಆಸೆ ಆಮಿಷದಿಂದ ಈ ಕೆಲಸ ಮಾಡುತ್ತಿಲ್ಲ ಎಂದು ಡಾ ಪುಷ್ಪ ಅಮರನಾಥ್ ಸ್ಪಷ್ಟಪಡಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!