ಸಿಲಿಂಡರ್ ಸ್ಫೋಟಕಕ್ಕೆ ಸಂಬಂಧಿಸಿದಂತೆ ಅಯ್ಯಪ್ಪ ಮಾಲಾಧಾರಿಗಳ ಸಾ*ನ ಸಂಖ್ಯೆ 6ಕ್ಕೆ ಏರಿಕೆ.

ಹುಬ್ಬಳ್ಳಿ :- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮತ್ತು ಮಂಜು ವಾಗ್ಮೋಡೆ (22) ಮೃತ ದುರ್ದೈವಿಗಳು. ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ.86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ.80 ರಷ್ಟು, ರಾಜು ಮೂಗೇರಿಯ ದೇಹ ಶೇ.74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ.86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ.99 ರಷ್ಟು ಮತ್ತು ಮಂಜು ವಾಗ್ಮೋಡೆ ದೇಹ ಶೇ.70 ರಷ್ಟು ಸುಟ್ಟಿತ್ತು. ಇನ್ನೂ ಚಿಂತಾಜನಕ ಸ್ಥಿತಿಯಲ್ಲಿರುವ ಪ್ರಕಾಶ್ ಬಾರಕೇರ್ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಇವರಲ್ಲಿ 6 ಜನರು ಮೃತಪಟ್ಟಿದ್ದಾರೆ.

ಚಿಕಿತ್ಸೆ ಫಲಿಸದೆ ಗುರುವಾರ ರಂದು ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಮೃತಪಟ್ಟಿದ್ದರು. ಶುಕ್ರವಾರ (ಡಿ.27) ರಂದು ರಾಜು ಮೂಗೇರಿ ಮತ್ತು ಲಿಂಗರಾಜ ಬೀರನೂರ ಸಾವಿಗೀಡಾಗಿದ್ದರು. ರವಿವಾರ (ಡಿ.29) ಶಂಕರ್ ಚವ್ಹಾಣ್ ಮತ್ತು ಮಂಜು ವಾಗ್ಮೋಡೆ ಮೃತಪಟ್ಟಿದ್ದಾರೆ. ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದಲ್ಲದೇ, ಕಿಮ್ಸ್ ವೈದ್ಯರು ರಾಜ್ಯ ಮತ್ತು ದೇಶದ ವಿವಿಧ ಭಾಗದ ತಜ್ಞ ವೈದ್ಯರಿಂದ ಮಾಹಿತಿ ಪಡೆದುಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಮಾಲಾಧಾರಿಗಳಿಗೆ ಶೇ70 ಕ್ಕಿಂತ ಹೆಚ್ಚು ಸುಟ್ಟ ಗಾಯವಾದ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ.
9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ, ಬಾಲಕನನ್ನು ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!