ಸಿ.ಎಂ ಗೆ ಮತ್ತೆ ಶುರುವಾಯ್ತು ಮುಡಾ ಸಂಕಷ್ಟ !!!

ರಾಜ್ಯದೆಲ್ಲೆಡೆ ಸಂಚಲನವನ್ನು ಸೃಷ್ಟಿ ಮಾಡಿ ಸುದ್ದಿ ಆಗ್ತಾ ಇರೋದು ಅಂದ್ರೆ ಅದು ಮೂಡ ಹಗರಣ. ಇದೀಗ ಸುದ್ದಿ ಮತ್ತೆ ಎಲ್ಲೆಡೆ ಚರ್ಚೆ ಆಗ್ತಾಯಿದೆ. ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.ತಕರಾರು ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿ ಇದೆ.

 

ನಮ್ಮ ತನಿಖೆಯಲ್ಲಿ ಅವರು ತಪ್ಪುಗಳು ಸಾಭೀತಾಗಿದೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಹೀಗಾಗಿ ಲೋಕಾಯುಕ್ತ ವರದಿಯನ್ನ ತಿರಸ್ಕರಿಸಿ ಎಂದು ಇಡಿ ಒಟ್ಟು 8 ಪುಟಗಳ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನ ಮೈಸೂರು ಲೋಕಾಯುಕ್ತರಿಗೆ ವಹಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕೋರ್ಟ್ಗೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿತ್ತು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!