ಸುಂದರ ಕ್ಷಣಕ್ಕೆ ಸಾಕ್ಷಿಯಾದ ಗೆಲುವು…. ಪತ್ನಿಯ ಗೆಲುವನ್ನು ತನ್ನ ಗೆಲುವೆಂದು ಸಂಭ್ರಮಿಸಿದ ಪತಿ….

ಮದುವೆಯಾದ ಬಳಿಕ ಹೆಣ್ಣು ಮಕ್ಕಳ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಗಂಡ ಮನೆ ಮಕ್ಕಳು ಎಂದು ತನ್ನ ಕುಟುಂಬಕ್ಕಾಗಿ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಜಿಸಬೇಕಾಗುತ್ತದೆ. ಆದರೆ ತನ್ನ ಕನಸುಗಳಿಗೆ ಬೆಂಬಲ ನೀಡುವ ಪತಿ ಸಿಕ್ಕರೆ ಆಕೆಯಷ್ಟು ಅದೃಷ್ಟವಂತೆ ಬೇರೆ ಯಾರು ಇಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪತ್ನಿ ವೇದಿಕೆಯ ಮೇಲೆ ಗೆಲುವಿನ ಕಿರೀಟ ಅಲಂಕರಿಸಿದರೆ ಪತಿ ಸಿಳ್ಳೆ ಹೊಡೆದು ಆ ಕ್ಷಣವನ್ನು ಸಂಭ್ರಮಿಸಿರುವ ವಿಡಿಯೋವೊಂದು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

ಪ್ರತಿಯೊಬ್ಬ ಹೆಣ್ಣು ಗಂಡ ತನ್ನ ಜೊತೆಗೆ ನಿಲ್ಲಬೇಕು, ತನ್ನ ಸಂತೋಷ, ನೋವು ಹಾಗೂ ಕನಸುಗಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಬಯಸುತ್ತಾಳೆ. ಅಂತಹ ಗಂಡ ಸಿಕ್ಕರೆ ಅದಕ್ಕಿಂತ ಹೆಚ್ಚು ಇನ್ನೇನು ಬೇಕು ಅಲ್ಲವೇ, ಅಂತಹ ಗಂಡನನ್ನು ಪಡೆದಿರುವುದೇ ಆಕೆಯ ಅದೃಷ್ಟ ಎನ್ನಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋವು ಪತಿಯೂ ತನ್ನ ಪತ್ನಿಯ ಕನಸಿಗೆ ಹಾಗೂ ಗೆಲುವಿಗೆ ಹೇಗೆ ಬೆಂಬಲವಾಗಿ ನಿಂತಿದ್ದಾನೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಹೌದು, ವೇದಿಕೆಯ ಮೇಲೆ ಮಹಿಳೆಯೊಬ್ಬಳು ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. ವೇದಿಕೆ ಮುಂಭಾಗದಲ್ಲಿ ಪತಿಯೂ ಮಗನನ್ನು ಎತ್ತಿಕೊಂಡು ಈ ಗೆಲುವನ್ನು ಸಂಭ್ರಮಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗುತ್ತಿದ್ದಂತೆ ಈಕೆ ನಿಜಕ್ಕೂ ಅದೃಷ್ಟವಂತೆ ಎಂದು ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಗಂಡಸರು ಅಡುಗೆ ಮಾಡೋದಕ್ಕೆ, ಮನೆ ಸ್ವಚ್ಛಗೊಳಿಸುವುದಕ್ಕೆ ಹಾಗೂ ಮನೆಯ ನಿರ್ವಹಿಸುವುದಕ್ಕೆ ಮದುವೆಯಾಗಲ್ಲ, ಕೆಲವರು ಮಾತ್ರ ತಮ್ಮ ಪತ್ನಿ ಗೆಲುವುದನ್ನು ನೋಡಲು ಇಷ್ಟ ಪಡುತ್ತಾರೆ. ಗೆದ್ದರೆಅದನ್ನು ಸಂಭ್ರಮಿಸುತ್ತಾರೆ ಎಂದು ಬರೆಯಲಾಗಿದೆ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಅಡುಗೆ ಕೆಲಸದಲ್ಲಿ ಬ್ಯುಸಿಯಾಗಿರುವುದನ್ನು ನೋಡಬಹುದು. ಆ ಬಳಿಕ ಬಾಡಿ ಬಿಲ್ಡಿಂಗ್ನಲ್ಲಿ ಗೆಲುವು ಸಾಧಿಸಿ ವೇದಿಕೆಯ ಮೇಲೆ ನಿಂತಿರುವ ಪತ್ನಿಯನ್ನು ಕಂಡು ಪತಿಯೂ ಖುಷಿ ಪಟ್ಟಿದ್ದಾನೆ. ಮಗುವನ್ನು ಎತ್ತಿಕೊಂಡು ಸ್ಟೇಜ್ ಮುಂದೆ ನಿಂತಿದ್ದ ಸಿಳ್ಳೆ ಹೊಡೆದು ಪತ್ನಿಯ ಗೆಲುವನ್ನು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.

 

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!