ಅಡುಗೆ ರುಚಿ ಮಾತ್ರವಲ್ಲ, ಕೂದಲಿನ ಅಂದವನ್ನು ಹೆಚ್ಚಿಸುತ್ತದೆ ‘ಉಪ್ಪು’ !? ಎಲ್ಲಿದೆ ಸಿಂಪಲ್ ಟಿಪ್ಸ್.

ಉಪ್ಪಿಲ್ಲದ ಅಡುಗೆಯನ್ನು ತಿನ್ನುವುದು ಕಷ್ಟಕರ. ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಯೋಜನ ಒಂದೆರಡಲ್ಲ. ನಿಯಮಿತವಾಗಿ ಉಪ್ಪು ಸೇವನೆಯೂ ಆರೋಗ್ಯಕ್ಕೆ ಹಲವು ರೀತಿಯ ಲಾಭಗಳಿವೆ. ಅದೇ ರೀತಿ ಚರ್ಮ ಹಾಗೂ ಕೂದಲಿನ ಆರೈಕೆಗೂ ಈ ಉಪ್ಪನ್ನು ಬಳಸಬಹುದಾಗಿದೆ. ಹೌದು, ಉಪ್ಪು ಚರ್ಮದ ಜೊತೆಗೆ ಕೂದಲಿನ ಅನೇಕ ಸಮಸ್ಯೆಗಳಿಗೆ ರಾಮಬಾಣವಾಗಿದೆ.ಮಹಿಳೆಯ ಅಂದ ಹೆಚ್ಚಿಸುವುದೇ ಉದ್ದ ಹಾಗೂ ದಟ್ಟವಾದ ಕೂದಲು. ಆದರೆ ಇತ್ತೀಚೆಗಿನ ದಿನಗಳಲ್ಲಿ ನಾನಾ ರೀತಿಯ ಕೂದಲಿನ ಸಮಸ್ಯೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಿಗುವ ಶ್ಯಾಂಪೂ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಕೂದಲಿನ ಆರೈಕೆಗೆ ಬಳಸುತ್ತಾರೆ. ಆದರೆ ಈ ಕೂದಲಿಗೆ ಬಳಸುವ ರಾಸಾಯನಿಕ ಮತ್ತು ಕೂದಲಿನ ಉತ್ಪನ್ನಗಳು ಕೂದಲ ಕಾಂತಿಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಹೀಗಾಗಿ ಅಡುಗೆ ಮನೆಯಲ್ಲಿ ಉಪ್ಪನ್ನು ವಿವಿಧ ರೀತಿಯಲ್ಲಿ ಬಳಸುವ ಮೂಲಕ ಕೂದಲಿನ ಆರೈಕೆಗೆ ಮಾಡಬಹುದು. ಈ ಮೂಲಕ ಸೊಂಪಾದ ದಟ್ಟವಾದ ಕೂದಲನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಾದ್ರೆ ಉಪ್ಪಿನ ಬಳಕೆಯೂ ಕೂದಲಿನ ಆರೈಕೆಗೆ ಹೇಗೆ ಸಹಕಾರಿಯಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

• ಕೂದಲು ಉದುರುವ ಸಮಸ್ಯೆ ಮತ್ತು ತಲೆಹೊಟ್ಟು ಸಮಸ್ಯೆಯಿದ್ದು ಕೂದಲು ಸೊಂಪಾಗಿ ಬೆಳೆಯುತ್ತಿಲ್ಲ ಎನ್ನುವವರು ವಾರಕ್ಕೆ ಎರಡು ಬಾರಿಯಾದರೂ ಎಣ್ಣೆ ಹಾಗೂ ಉಪ್ಪನ್ನು ಬೆರೆಸಿ ಕೂದಲಿಗೆ ಚೆನ್ನಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಕೂದಲು ವೇಗವಾಗಿ ಹಾಗೂ ಸೊಂಪಾಗಿ ಬೆಳೆಯುತ್ತದೆ.

• ಉಪ್ಪಿನಲ್ಲಿರುವ ಮೆಗ್ನೀಸಿಯಮ್, ಪೊಟ್ಯಾಸಿಯಮ್ ಹಾಗೂ ಸೆಲೆನಿಯಮ್ ಖನಿಜಗಳು ಕೂದಲನ್ನು ಆರೋಗ್ಯಕರವಾಗಿಸಲು ಸಹಾಯ ಮಾಡುತ್ತದೆ. ಶ್ಯಾಂಪೂಗೆ ಉಪ್ಪು ಸೇರಿಸಿ ತಲೆಗೆ ನಿಧಾನವಾಗಿ ಮಸಾಜ್ ಮಾಡಿ. ಸ್ವಲ್ಪ ಸಮಯದವರೆಗೆ ಕೂದಲನ್ನು ಹಾಗೆ ಬಿಡಿ. ಆ ಬಳಿಕ ತಣ್ಣೀರಿನಿಂದ ಕೂದಲು ತೊಳೆಯುವುದರಿಂದ ಹೊಳೆಯುವುಳ್ಳ ಮತ್ತು ದಪ್ಪ ಕೂದಲು ನಿಮ್ಮದಾಗುತ್ತದೆ.

• ನಿಯಮಿತವಾಗಿ ಕೂದಲಿಗೆ ಉಪ್ಪನ್ನು ಅನ್ವಯಿಸುವುದರಿಂದ ಕೂದಲಿನ ಶುಷ್ಕತೆಯನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ಉಪ್ಪಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಅಂಶಗಳಿದ್ದು, ಇದು ಕೂದಲಿನಲ್ಲಿ ತೇವಾಂಶವನ್ನು ಕಾಪಾಡುವ ಮೂಲಕ ತಲೆಹೊಟ್ಟು ಹೋಗಲಾಡಿಸಲು ಸಹಕಾರಿಯಾಗಿದೆ.

• ಉಪ್ಪಿನಿಂದ ತಲೆಗೆ ಮಸಾಜ್ ಮಾಡುವ ಮೂಲಕ ಕೂದಲು ಉದುರುವಿಕೆ ಸಮಸ್ಯೆಗೆ ರಾಮಬಾಣವಾಗಿದೆ. ಉಪ್ಪನ್ನು ನೆತ್ತಿಯ ಮೇಲೆ ಉಜ್ಜುವುದರಿಂದ ಇದು ಕೊಳೆಯನ್ನು ತೆಗೆದು ಹಾಕುತ್ತದೆ. ಅದಲ್ಲದೇ, ನೆತ್ತಿಯ ರಂಧ್ರಗಳು ಸುಲಭವಾಗಿ ತೆರೆದುಕೊಂಡು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ.

• ನೀರಿಗೆ ಉಪ್ಪನ್ನು ಬೆರೆಸಿ ಕೂದಲು ತೊಳೆಯುವ ಮೂಲಕ ಕೂದಲಿನ ಆರೈಕೆ ಮಾಡಬಹುದು. ಇಲ್ಲವಾದರೆ ಶ್ಯಾಂಪೂವಿಗೆ ಉಪ್ಪು ಸೇರಿಸಿ ಕೂದಲನ್ನು ತೊಳೆಯುವುದು ಕೂಡ ಪರಿಣಾಮಕಾರಿಯಾಗಿದೆ. ಇದು ನೆತ್ತಿಯ ಸತ್ತ ಕೋಶಗಳನ್ನು ತೆಗೆದುಹಾಕಿ, ತೈಲ ಗ್ರಂಥಿಗಳ ಮೇದೋಗ್ರಂಥಿಗಳ ಸ್ರಾವ ಉತ್ಪಾದನೆಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಇದರಿಂದ ಕೂದಲಿನಲ್ಲಿರುವ ಹೆಚ್ಚುವರಿ ಎಣ್ಣೆ ಅಂಶವು ಕಡಿಮೆಯಾಗುತ್ತದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು