ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ, ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಸ್ಥಳೀಯರು.

ಹುಣಸೂರು :- ಅವೈಜ್ಞಾನಿಕವಾಗಿ ಚರಂಡಿ ಕಾಮಗಾರಿ ನಡೆಸಿದ ಹಿನ್ನಲೆ ಚರಂಡಿ ನೀರು ಮನೆಗಳಿಗೆ ನುಗ್ಗುತ್ತಿರುವ ಘಟನೆ ಹುಣಸೂರು ಬಡಾವಣೆ ನಿವಾಸಿಗಳನ್ನ ಹೈರಾಣುಗೊಳಿಸಿದೆ. ಕಾಮಗಾರಿ ನಡೆಸಿ ಕೈಕಟ್ಟಿ ಕುಳಿತ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.ಕೂಡಲೇ ಅವ್ಯವಸ್ಥೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ದಾರಿ ಹಿಡಿಯಬೇಕಾಗುತ್ತದೆಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.ಹುಣಸೂರು ತಾಲೂಕು ಮಂಜುನಾಥ ಬಡಾವಣೆ ವಾರ್ಡ್ 28 ರಲ್ಲಿನ ನಿವಾಸಿಗಳು ಚರಂಡಿ ನೀರಿನ ಅವ್ಯವಸ್ಥೆಯಿಂದಾಗಿ ಅಧಿಕಾರಿಗಳ ವಿರುದ್ದ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಇತ್ತೀಚೆಗೆ ನಡೆಸಿದ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿ ಮಾಡಿರುವ ಹಿನ್ನಲೆ ನೀರು ಸರಾಗವಾಗಿ ಹರಿದುಹೋಗದೆ ಮನೆಗಳಿಗೇ ನುಗ್ಗುತ್ತಿದೆ.ಲಕ್ಷಾಂತರ ವೆಚ್ಚ ಮಾಡಿ ಮಾಡಿದ ಕಾಮಗಾರಿ ಉಪಯೋಗಕ್ಕೆ ಬಾರದಂತಾಗಿದೆ.ಶೌಚಾಲಯ ನೀರು ಹರಿದುಹೋಗಲೆಂದು ಚರಂಡಿ ನಿರ್ಮಾಣ ಮಾಡಲಾಗಿದೆ.ಆದ್ರೆ ಚರಂಡಿಗೆ ಸೇರಿದ ನೀರು ಮುಂದೆ ಹರಿದುಹೋಗದೆ ತಟಸ್ಥವಾಗಿ ನಿಂತಿದೆ.ಅಲ್ಲದೆ ಮನೆಗೇ ವಾಪಸ್ ನುಗ್ಗುತ್ತಿದೆ.

ಇದರಿಂದಾಗಿ ಸಮಸ್ಯೆ ಮತ್ತಷ್ಟು ಉಲ್ಭಣವಾಗಿದೆ.ಈಗಾಗಲೇ ಸಮಸ್ಯಗೆ ಪರಿಹಾರ ಕಲ್ಪಿಸುವಂತೆ ಸ್ಥಳೀಯರು ಸಾಕಷ್ಟು ಬಾರಿ ದೂರು ನೀಡಿದ್ದಾರೆ.ಹೀಗಿದ್ದೂ ಕ್ಯಾರೆ ಎನ್ನದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.ಕೂಡಲೇ ಚರಂಡಿಯನ್ನ ವೈಜ್ಞಾನಿಕವಾಗಿ ನಿರ್ಮಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!