ಆಪರೇಷನ್ ಸಿಂಧೂರ್ ಬಳಿಕ, ಸಿಂಧೂರದ ಅರ್ಥ ಹುಡುಕಿದ ಪಾಕಿಸ್ಥಾನಿಯರು!!!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಬಳಿಕ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದ ಸೇನೆಯ ಆಪರೇಷನ್ ಸಿಂಧೂರ್ ನಡೆಸಿ, ಒಟ್ಟು 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಹೌದು, ಭಾರತವು ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಂತೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಈ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದ್ರೆ ಪಾಕಿಸ್ತಾನಿಯರು ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದು ಏನು? ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿರುವುದೇನು? ಎನ್ನುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ನಡೆಸಿ ತಿರುಗೇಟು ನೀಡಿದೆ. ಹೌದು, ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ತಮ್ಮವರನ್ನು ಕೊ*ದ ಪಾಕ್ ಉಗ್ರರಿಗೆ ಸರಿಯಾದ ಉತ್ತರ ನೀಡಿದೆ. ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ್ದು, ಪಾಕ್‌ ಜನತೆಯೂ ಈ ದಾಳಿಯಿಂದ ಬೆಚ್ಚಿ ಬಿದ್ದಿದ್ದು ಸದ್ಯಕ್ಕಂತೂ ಪಾಕಿಸ್ತಾನಿಯರು ಗೂಗಲ್ ನಲ್ಲಿ ಸಿಂಧೂರ ಹೆಸರಿನ ಅರ್ಥವೇನು ಎನ್ನುವ ಬಗ್ಗೆ ಹುಡುಕಾಟ ನಡೆಸಿದ್ದಾರೆ.

ಹೌದು, ಪಾಕಿಸ್ತಾನಿಯರು ಗೂಗಲ್ ನಲ್ಲಿ ಆಪರೇಷನ್ ಸಿಂಧೂರ್, ಆಪರೇಷನ್ ಸಿಂಧೂರ್ ವಿಕಿ, ಇಂಡಿಯಾ ಆಪರೇಷನ್ ಸಿಂಧೂರ್, ಸಿಂಧೂರ್ ಅಟ್ಯಾಕ್, ಭಾರತದ ಕ್ಷಿಪಣಿ ದಾಳಿ, ಆಪರೇಷನ್ ಸಿಂಧೂರ್ ಎಂದರೇನು? ಬಿಳಿಧ್ವಜ, ಪಾಕಿಸ್ತಾನದ ಮೇಲೆ ಭಾರತದ ದಾಳಿ, ವಾಯುದಾಳಿ, ಭಾರತೀಯ ಸೇನೆ ಈ ಕೆಲವು ವಿಷಯಗಳ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಗೂಗಲ್ ನಲ್ಲಿ ಹುಡುಕಾಟ ನಡೆಸಿದ್ದಾರೆ.ಅದಲ್ಲದೆ, ಈ ಪಾಕ್ ಪ್ರಜೆಗಳು ʻಸಿಂಧೂರ ಎಂದರೇನು ಎನ್ನುವ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡು ಹುಡುಕಾಟ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಉಳಿದಂತೆ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತೀಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನ ಸೇನೆಯ ಕಾರ್ಯಾಚರಣೆಯ ಬಗ್ಗೆ ಹುಡುಕಾಟ ನಡೆಸಿರುವುದು ಗೂಗಲ್ ಟ್ರೆಂಡ್ ನಲ್ಲಿ ತಿಳಿದು ಬಂದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!