ಆಪರೇಷನ್ ಸಿಂಧೂರ ಒಂದೊಳ್ಳೆ ರೋಚಕ ಕಥೆ ಎಂದ ನಿರ್ದೇಶಕ ….

ಕಾಶ್ಮೀರದ ಪಹಲ್ಗಾಮ್ ನಲ್ಲಿ 26 ಮಂದಿ ಭಾರತೀಯರು ಉಗ್ರರ ದಾಳಿಗೆ ಕೊನೆಯುಸಿರೆಳೆದಿದ್ದರು. ಇಂದು ಭಾರತ, ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಿದೆ ಎಂದು ಹೇಳಬಹುದು.ಇದರ ಬೆನ್ನಲ್ಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಕನ್ನಡದಲ್ಲಿ ಸಿನಿಮವಾಗುವ ಚರ್ಚೆಯಾಗುತ್ತಿದೆ.
ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ. ಜಸ್ಟ್ 23 ನಿಮಿಷದಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಏಕಕಾಲಕ್ಕೆ ಧ್ವಂಸ ಮಾಡಿರೋ ಕಾರ್ಯಾಚರಣೆ ಮೈ ಜುಮ್ಮೆನ್ನುವಂತೆ ಮಾಡಿದೆ. ಭಾರತೀಯ ಸೇನೆಯ ಈ ಯಶಸ್ವಿ ಕಾರ್ಯಾಚರಣೆಗೆ ಆಪರೇಷನ್ ಸಿಂಧೂರ ಅನ್ನೋ ಹೆಸರಿಟ್ಟಿರೋದೇ ವಿಶೇಷವಾಗಿದೆ.ಆಪರೇಷನ್ ಸಿಂಧೂರ ಪಹಲ್ಗಾಮ್‌ನಲ್ಲಿ ಸಿಂಧೂರ ಅಳಿಸಿದ ಉಗ್ರರ ಸಂಹಾರದ ಪ್ರತೀಕವಾಗಿದೆ. ಕಣ್ಣ ಮುಂದೆಯೇ ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ನ್ಯಾಯ ನೀಡುವ ಭಾರತದ ಹೋರಾಟವಾಗಿದೆ. ಭಯೋತ್ಪಾದಕರ ಬುಡಕ್ಕೆ ಬೆಂಕಿ ಇಟ್ಟಿರುವ ಅಪರೇಷನ್ ಸಿಂಧೂರ ಭಾರತದ ಇತಿಹಾಸದಲ್ಲಿ ಅಚ್ಚಳಿಯದೇ ಉಳಿಯೋದರಲ್ಲೂ ಅನುಮಾನವೇ ಇಲ್ಲ.

ಆಪರೇಷನ್ ಸಿಂಧೂರದ ಬಗ್ಗೆ ಎಲ್ಲೆಲ್ಲೂ ಚರ್ಚೆಯಾಗುತ್ತಿರುವಾಗಲೇ ಆಪರೇಷನ್ ಸಿಂಧೂರ ಸಿನಿಮಾ ಆಗುತ್ತಾ ಅನ್ನೋದು ಕುತೂಹಲ ಕೆರಳಿಸಿದೆ. ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎ.ಎಂ.ಆರ್ ರಮೇಶ್‌ ಅವರು ಈ ಬಗ್ಗೆ ಮಾತನಾಡಿ ಇದು ಒಂದೊಳ್ಳೆ ರೋಚಕ ಕಥೆ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.ಸೈನೈಡ್, ಅಟ್ಟಹಾಸ ಅನ್ನೋ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಎ.ಎಂ.ಆರ್ ರಮೇಶ್ ಅವರು ಮಾತನಾಡಿ ಇಂದು ನಿಜಕ್ಕೂ ರೋಮಾಂಚನವಾಗುತ್ತಿದೆ. ಭಯೋತ್ಪಾದಕರು ಸತ್ತಿದ್ರೆ, ನಿಜಕ್ಕೂ ಖುಷಿಯ ವಿಚಾರ. ಇಂತಹದೊಂದು ಪ್ರತೀಕಾರದ ದಾಳಿಯನ್ನ ನಾವು ಎದುರು ನೋಡುತ್ತಾ ಇದ್ವಿ. ಉಗ್ರರಿಗೆ ಭಾರತೀಯ ಸೇನೆ ತಕ್ಕದಾದ ಉತ್ತರ ಕೊಟ್ಟಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ ಹೆಸರಲ್ಲೇ ಒಂದು ಎಮೋಷನ್ ಇದೆ. ಸಿನಿಮಾ ಮಾಡೋಕೆ ನಿಜಕ್ಕೂ ಒಂದೊಳ್ಳೆ ಘಟನೆ ಇದು‌. ಈ ಸ್ಕ್ರೈಕ್ ಹಿಂದಿನ ಕಥೆ ಹಿಡಿದ್ರೆ ಒಂದೊಳ್ಳೆ ರೋಚಕ ಕಥೆ ಆಗುತ್ತೆ. ಯಾರಾದ್ರೂ ಈ ಸಿನಿಮಾ ಮಾಡೋರಿಗೆ ಒಳ್ಳೆಯದಾಗಲಿ. ಈಗಾಗಲೇ ಬಹುಶಃ ಯಾರಾದರೂ ಟೈಟಲ್ ರಿಜಿಸ್ಟರ್ ಮಾಡಿಸಿದ್ರೂ ಮಾಡಿಸಿರುತ್ತಾರೆ ಎಂದು ಎ.ಎಂ.ಆರ್ ರಮೇಶ್ ಹೇಳಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!