ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರಾಂಡ್ ಸ್ಪೆಪ್ಸ್ ಮೇಲೆ ನೆರವೇರಿತ್ತು. ಆರ್ಸಿಬಿ ಆಟಗಾರರನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್ಸಿಬಿ ಆಟಗಾರರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ವಿಧಾನಸೌಧದ ಪಕ್ಕದಲ್ಲಿ ಇದ್ದ ಕಬ್ಬನ್ ಪಾರ್ಕ್ನಲ್ಲಿನ ಮರಗಳ ಮೇಲೆ ಹತ್ತಿ ಆಟ ಗಾರರನ್ನು ನೋಡಲು ಮುಂದಾದರು. ಈ ವೇಳೆ ಅಭಿಮಾನಿಗಳ ಕಾಲ್ತುಳಿತದಿಂದ ಸಾಕಷ್ಟು ಸಸಿಗಳು ಹಾಳಾಗಿವೆ.ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಕೋರ್ಟ್ ಮೆಟ್ಟಿಲು ಏರಿದೆ.

ಕಬ್ಬನ್ ಪಾರ್ಕ್ಲ್ಲಿದ್ದ ಸಸಿಗಳು, ಮರಗಳಿಗೆ ಮತ್ತು ಉದ್ಯಾನವನಕ್ಕೆ ಹಾನಿಯಾಗಿದೆ. ಹಾಗೇ ವಿಧಾನಸೌಧದ ಮುಂಭಾಗದ ಗಾರ್ಡನ್ನಲ್ಲೂ ಹಾನಿಯಾಗಿದೆ. ತೋಟ ಗಾರಿಕೆ ಇಲಾಖೆ ಕಬ್ಬನ್ ಪಾರ್ಕ್ನಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಲಾನ್ ಅಳವಡಿಸಿತ್ತು. ಈ ಲಾನ್ಗು ಕೂಡ ಕಾಲ್ತುಳಿತದಲ್ಲಿ ಹಾನಿಯಾಗಿದೆ. ಕಬ್ಬನ್ ಪಾರ್ಕ್ಗೆ ಹಾನಿಯಾದರೆ ನೀವೇ ಹೊಣೆಗಾರರು ಅಂತ ಆರ್ಸಿಬಿ ಮತ್ತು ಕೆಎಸ್ಸಿಎಗೆ ಮೊದಲೇ ಷರತ್ತು ಹಾಕಲಾಗಿತ್ತು.

ಇದೀಗ ಕಾಲ್ತುಳಿತದಲ್ಲಿ ಪಾರ್ಕ್ಗೆ ಹಾನಿಯಾಗಿದ್ದು, ಈ ನಷ್ಟವನ್ನು ಆರ್ಸಿಬಿ ಹಾಗೂ ಕೆಎಸ್ಸಿಎ ಭರಿಸಿಕೊಡ ಬೇಕು ಅಂತ ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದೆ.