
ಆಸ್ತಿ ಮಾಲೀಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರವು ಇ-ಖಾತ ಅಭಿಯಾನ ಹಮ್ಮಿಕೊಂಡಿದೆ. ಕರ್ನಾಟಕ ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2025 ಮಂಡಿಸಿದ್ದು, ಈ ಮೂಲಕ ಗ್ರಾಮೀಣ ಭಾಗದ ಅನಧಿಕೃತ ಆಸ್ತಿಗಳಿಂದ ತೆರಿಗೆ ಅಥವಾ ದಂಡ ವಸೂಲಿ ಹಾಗೂ ಆ ಸ್ವತ್ತುಗಳನ್ನು ಇ-ಖಾತಾ ವ್ಯವಸ್ಥೆಯಡಿ ತರಲಿದೆ. ಇನ್ನು ಪಾಲಿಕೆ ವ್ಯಾಪ್ತಿಯಲ್ಲಿ ಮಾತ್ರ ಇದ್ದ ಇ-ಖಾತಾ ವಿತರಣೆ ಇನ್ಮುಂದೆ ಪಂಚಾಯಿತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲೂ ಇ-ಖಾತಾ ವಿತರಣೆಗೆ ಪ್ಲ್ಯಾನ್ ಮಾಡಿದ್ದು, ಇದೇ ಜುಲೈ 15ರಿಂದ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಇ-ಖಾತಾ ಸಿಗುವ ಸಾಧ್ಯತೆಗಳಿವೆ.





