ಇಂದು ಮನೆಯಂಗಳಲ್ಲಿ ಆರ್‌ಸಿಬಿ ಗೆದ್ದರೆ ಮಹತ್ವದ ಬದಲಾವಣೆಯಾಗುವುದು ಖಚಿತ.

ಐಪಿಎಲ್ ಸೀಸನ್ 18ರ 42ನೇ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈಗಾಗಲೇ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್ಸಿಬಿ ತಂಡವು ಆರ್ ಆರ್ ವಿರುದ್ದ ಗೆದ್ದರೆ ಒಟ್ಟು 12 ಅಂಕಗಳನ್ನು ಪಡೆದುಕೊಳ್ಳಲಿದೆ. ಈ ಮೂಲಕ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಯನ್ನು ನಾವು ಕಾಣಬಹುದಾಗಿದೆ.

ಸತತ ಮೂರು ಪಂದ್ಯಗಳನ್ನು ಮನೆ ಅಂಗಳದಲ್ಲಿ ಸೋತಿರುವ ಆರ್‌ಸಿಬಿ ಪಡೆಯು ಈ ಪಂದ್ಯದಲ್ಲಿ ಆರ್ ಆರ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಒಟ್ಟು 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆಯಬಹುದು. ಅಲ್ಲದೇ ಪ್ಲೇ ಆಫ್ ಆದಿಯನ್ನು ಮತ್ತಷ್ಟು ಸುಲಭಗೊಳಿಸಬಹುದಾಗಿದೆ. ಹೀಗಾಗಿ ಇಂದಿನ ಪಂದ್ಯವು ಆರ್‌ಸಿಬಿ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

ಇನ್ನು ಅಂಕ ಪಟ್ಟಿಯನ್ನು ನೋಡುವುದಾದರೆ ಸದ್ಯ ಐಪಿಎಲ್ 18 ನೇ ಸೀಸನ್ ನಲ್ಲಿ ಆರ್ ಸಿ ಬಿ ತಂಡವು ಆಡಿರುವ 8 ಪಂದ್ಯಗಳಲ್ಲಿ ಐದು ಜಯಗಳನ್ನು ಗಳಿಸಿ 0.472 ನೆಟ್ ರನ್ ರೇಟ್ ನೊಂದಿಗೆ ನಾಲ್ಕನೇ ಪಟ್ಟವನ್ನು ಅಂದರೆ ಸ್ಥಾನವನ್ನು ಅಲಂಕರಿಸಿದೆ. ಹೀಗಾಗಿ ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದರೆ ಉತ್ತಮ ರನ್ ರೇಟ್ ನೊಂದಿಗೆ ಅಂಕಪಟ್ಟಿಯಲ್ಲಿ ಮತ್ತೆ ಮೇಲೇರಬಹುದು ಅದು ಸಹ ದ್ವಿತೀಯ ಸ್ಥಾನದಲ್ಲಿ ಕೂರಬಹುದು.

ಇನ್ನು ಅಂಕಿ ಅಂಶಗಳ ಲೆಕ್ಕಚಾರಕ್ಕೆ ಬಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈವರೆಗೆ ಒಟ್ಟು 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ ಈ ವೇಳೆ ಆರ್‌ಸಿಬಿ ತಂಡ 16 ಬಾರಿ ಗೆಲುವನ್ನು ದಾಖಲಿಸಿದರೆ, ರಾಜಸ್ಥಾನ್ ರಾಯಲ್ಸ್ ತಂಡ 14 ಬಾರಿ ಜಯವನ್ನು ಸಾಧಿಸಿದೆ. ಇನ್ನು ಮೂರು ಪಂದ್ಯಗಳು ಕಾರಣಾಂತರಗಳಿಂದ ರದ್ದಾಗಿದೆ. ಹೀಗಾಗಿ ಮೇಲುಗೈ ಸಾಧಿಸಿರುವ ಆರ್‌ಸಿಬಿ ತಂಡವು ಮತ್ತೊಮ್ಮೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿ ಎಂಬುದು ಎಲ್ಲಾ ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!