ಏಳು ವರ್ಷಗಳ ಬಳಿಕ ಐಪಿಎಲ್ ನೆಲದಲ್ಲಿ ಅರ್ಧಶತಕ ಭಾರಿಸಿದ ಕನ್ನಡಿಗ ಕರುಣ್ ನಾಯರ್…..

ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 205 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19 ಓವರ್ಗಳಲ್ಲಿ 193 ರನ್ಗಳಿಸಿ ಆಲೌಟ್ ಆದರು. ಆದರೆ ಈ ಚೇಸಿಂಗ್‌ಗೆ ಜೀವ ತುಂಬಿದ್ದು ಕರ್ನಾಟಕದ ಪುತ್ರ ಕರುನ್ ನಾಯರ್. 40 ಎಸೆತಗಳಲ್ಲಿ 12 ಫೋರ್ಗಳು ಹಾಗೂ ಐದು ಸಿಕ್ಸಸ್ ಗಳೊಂದಿಗೆ ಒಟ್ಟು 89ರನ್ಗಳನ್ನು ತಂಡಕ್ಕೆ ಕೊಡುಗೆಯಾಗಿ ನೀಡಿದರು. ಇಂಫಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ಇಂಪಾರ್ಟೆಂಟ್ ರೋಲ್ ನಿಭಾಯಿಸಿದರು. ಅಲ್ಲದೆ ಐಪಿಎಲ್ ನಲ್ಲಿ ಅವರ ಫಾಸ್ಟೆಸ್ಟ್ ಟಿ ಟ್ವೆಂಟಿ ಆಫ್ ಸೆಂಚುರಿಯನ್ನು ಸಹ ಸಿಡಿಸಿದರು.

ಇಂಡಿಯನ್ ಪ್ರೀಮಿಯರ್ ಲೀಗ್ನ 29ನೇ ಪಂದ್ಯದ ಮೂಲಕ ಕರುಣ್ ನಾಯರ್ ಐಪಿಎಲ್ಗೆ ಕಂಬ್ಯಾಕ್ ಮಾಡಿದ್ದಾರೆ. ಈ ಕಂಬ್ಯಾಕ್ ಪಂದ್ಯದಲ್ಲೇ ಆಕರ್ಷಕ ಅರ್ಧಶತಕವನ್ನೂ ಸಹ ಬಾರಿಸಿದ್ದಾರೆ. ಅದು ಕೂಡ 7 ವರ್ಷಗಳ ಬಳಿಕ ಎಂಬುದೇ ಅಚ್ಚರಿ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ 33 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 59 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿತು.ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಕರುಣ್ ನಾಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೆ ಈ ಪಂದ್ಯದಲ್ಲಿ 40 ಎಸೆತಗಳನ್ನು ಎದುರಿಸಿದ ಕರುಣ್ 5 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 89 ರನ್ ಬಾರಿಸಿದರು. ಈ ಸ್ಪೋಟಕ ಇನಿಂಗ್ಸ್ನ ಹೊರತಾಗಿಯೂ ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 12 ರನ್ಗಳಿಂದ ಸೋಲೊಪ್ಪಿಕೊಂಡಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!