ಐಪಿಎಲ್ 2025 ಪುನರಾರಂಭ: RCB ತಂಡ ಮೊದಲ ಪಂದ್ಯವನ್ನಾಡಲಿದೆ….

ಇಂಡಿಯನ್ ಪ್ರೀಮಿಯರ್ ಲೀಗ್ನ 59ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಟೂರ್ನಿಯು ಅರ್ಧದಲ್ಲೇ ಸ್ಥಗಿತಗೊಂಡಿದ್ದರಿಂದ ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ಈ ಪಂದ್ಯ ಜರುಗಿರಲಿಲ್ಲ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಯುದ್ಧ ಭೀತಿ ಹಿನ್ನಲೆ ಅರ್ಧದಲ್ಲೇ ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಶುಕ್ರವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ. ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಾಳಿಯಾಗಿ ಕಣಕ್ಕಿಳಿಯುವುದು ಲಕ್ನೋ ಸೂಪರ್ ಜೈಂಟ್ಸ್. ಏಕೆಂದರೆ ಐಪಿಎಲ್ನ 59ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಬೇಕಿತ್ತು. ಇದೀಗ ಈ ಪಂದ್ಯದ ಮೂಲಕವೇ ಟೂರ್ನಿಯನ್ನು ಮತ್ತೆ ಶುರು ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಈಗಾಗಲೇ ಗುಜರಾತ್ ಟೈಟಾನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್ನ ಉಳಿದ ಪಂದ್ಯಗಳಿಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಈ ಸಿದ್ಧತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡ ಕಣಕ್ಕಿಳಿಯಲಿದೆ ಎಂದು ಎಎನ್ಐ ಮೂಲಗಳು ತಿಳಿಸಿವೆ. ಹೀಗಾಗಿ ಐಪಿಎಲ್ ಪುನರಾರಂಭವಾದರೆ ಮೊದಲ ಮ್ಯಾಚ್ನಲ್ಲಿ ಆರ್ಸಿಬಿ ಪಡೆ ಕಾಣಿಸಿಕೊಳ್ಳುವುದು ಖಚಿತ.

ಇದಾಗ್ಯೂ ಈ ಪಂದ್ಯವನ್ನು ಎಲ್ಲಿ ಆಯೋಜಿಸಲಾಗುತ್ತದೆ ಎಂಬುದರ ಖಚಿತ ಮಾಹಿತಿ ಹೊರಬಿದ್ದಿಲ್ಲ. ಈ ಹಿಂದಿನ ವೇಳಾಪಟ್ಟಿಯ ಪ್ರಕಾರ, ಆರ್ಸಿಬಿ-ಎಲ್ಎಸ್ಜಿ ನಡುವಣ ಪಂದ್ಯವು ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯಬೇಕಿತ್ತು. ಇದೀಗ ವೇಳಾಪಟ್ಟಿಯನ್ನು ಮರುನಿಗದಿ ಮಾಡುತ್ತಿರುವುದರಿಂದ ಉಭಯ ತಂಡಗಳು ತಟಸ್ಥ ಮೈದಾನದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಐಪಿಎಲ್ನ ಲೀಗ್ ಹಂತದ ಉಳಿದ ಪಂದ್ಯಗಳನ್ನು ದಕ್ಷಿಣ ಭಾರತದಲ್ಲಿ ಆಯೋಜಿಸುವ ಬಗ್ಗೆ ಐಪಿಎಲ್ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯವು ಹೈದರಾಬಾದ್, ಚೆನ್ನೈ ಅಥವಾ ಬೆಂಗಳೂರಿನಲ್ಲಿ ಆಯೋಜಿಸಬಹುದು. ಈ ಮೂಲಕ ರಂಗು ರಂಗಿನ ಕ್ರಿಕೆಟ್ ಟೂರ್ನಿಗೆ ಮತ್ತೆ ಚಾಲನೆ ನೀಡಲು ಬಿಸಿಸಿಐ ಯೋಜನೆ ರೂಪಿಸಿದೆ.

 

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!