ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದ : ಗೊಂಗಡಿ ತ್ರಿಶಾ!

ಭಾರತ ಮಹಿಳಾ ಕ್ರಿಕೆಟ್ ತಂಡವು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನಲ್ಲಿ ಗೆಲುವು ಸಾಧಿಸಿದೆ. ಗೊಂಗಡಿ ತ್ರಿಶಾ ಅವರ ಅದ್ಭುತ ಆಲ್-ರೌಂಡ್ ಪ್ರದರ್ಶನದಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ತ್ರಿಶಾ ಅವರು ಫೈನಲ್ನಲ್ಲಿ 44 ರನ್ ಗಳಿಸಿ ಮತ್ತು 3 ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಅಲ್ಲದೆ, ಪಂದ್ಯಾವಳಿಯಲ್ಲಿ ಅತ್ಯಧಿಕ ರನ್ ಮತ್ತು ವಿಕೆಟ್ ಪಡೆದು ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯನ್ನೂ ಗೆದ್ದರು.

ಮಲೇಷ್ಯಾದ ರಾಜಧಾನಿ ಕೌಲಾಲಂಪುರದಲ್ಲಿ ನಡೆದ ಎರಡನೇ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ಗಳಿಂದ ಸೋಲಿಸುವ ಮೂಲಕ ಭಾರತ ಮಹಿಳಾ ತಂಡ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿತು. ಇದಕ್ಕೂ ಮೊದಲು 2023ರಲ್ಲಿ ನಡೆದಿದ್ದ ಮೊದಲ ಆವೃತ್ತಿಯನ್ನು ಕೂಡ ಶೆಫಾಲಿ ವರ್ಮಾ ನಾಯಕತ್ವದ ಭಾರತ ತಂಡ ಗೆದ್ದುಕೊಂಡಿತ್ತು. ಇದೀಗ ಸತತ ಎರಡನೇ ಬಾರಿಗೆ ಭಾರತ ಈ ಟ್ರೋಫಿ ಎತ್ತಿಹಿಡಿಯುವ ಮೂಲಕ ಇತಿಹಾಸ ಸೃಷ್ಟಿಸಿದೆ. ಭಾರತ ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗುವಲ್ಲಿ ಯುವ ಆಲ್ ರೌಂಡರ್ ಗೊಂಗಡಿ ತ್ರಿಶಾ ಅವರ ಪಾತ್ರವೇ ಬಹುಮುಖ್ಯವಾಗಿತ್ತು.
ಪಂದ್ಯಾವಳಿಯ ಆಟಗಾರ್ತಿ
ಇದಲ್ಲದೆ ಇಡೀ ಪಂದ್ಯಾವಳಿಯಲ್ಲಿ ರನ್ಗಳ ಶಿಖರ ಕಟ್ಟಿದ ತ್ರಿಶಾ, ಟಿ20 ವಿಶ್ವಕಪ್ನಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ಇಡೀ ಟೂರ್ನಿಯಲ್ಲಿ ಅತ್ಯಧಿಕ 309 ರನ್ ಕಲೆಹಾಕುವ ಮೂಲಕ ಹೊಸ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡರು. ಬ್ಯಾಟಿಂಗ್ನಲ್ಲಿ ಮಾತ್ರವಲ್ಲದೆ ಬೌಲಿಂಗ್ನಲ್ಲೂ ಮ್ಯಾಜಿಕ್ ಮಾಡಿದ ತ್ರಿಶಾ ಇಡೀ ಪಂದ್ಯಾವಳಿಯಲ್ಲಿ 7 ವಿಕೆಟ್ಗಳನ್ನು ಪಡೆದರು. ಹೀಗಾಗಿ ತ್ರಿಶಾಗೆ ಪಂದ್ಯಾವಳಿಯ ಆಟಗಾರ್ತಿ ಪ್ರಶಸ್ತಿಯೂ ಲಭಿಸಿದೆ.
ಆಮೋಘ ಪ್ರದರ್ಶನ

ಈ ಬಾರಿ ತ್ರಿಶಾ ಈ ಫೈನಲ್ ಪಂದ್ಯದಲ್ಲಿ ಮಾತ್ರವಲ್ಲದೆ ಇಡೀ ಪಂದ್ಯಾವಳಿಯಲ್ಲೇ ಸೂಪರ್ಸ್ಟಾರ್ ಪ್ರದರ್ಶನ ನೀಡಿದರು. ಫೈನಲ್ನಲ್ಲಿ ಬ್ಯಾಟಿಂಗ್ನಲ್ಲಿ 44 ರನ್ಗಳ ಇನ್ನಿಂಗ್ಸ್ ಆಡುವುದಕ್ಕೂ ಮೊದಲು ಬೌಲಿಂಗ್ನಲ್ಲಿ ಮಿಂಚಿದ ತ್ರಿಶಾ ಪ್ರಮುಖ 3 ವಿಕೆಟ್ಗಳನ್ನು ಪಡೆದರು. ಈ ಆಲ್ರೌಂಡರ್ ಪ್ರದರ್ಶನಕ್ಕಾಗಿ ತ್ರಿಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.
ಶಾನುಭೋಗನಹಳ್ಳಿಯ ಅನ್ನಭಾಗ್ಯ ಅಕ್ಕಿ ಕಳ್ಳತನ ಪ್ರಕರಣ ಬಗ್ಗೆ ಗ್ರಾಮಸ್ಥರ ಸ್ಪಷ್ಟನೆ
ಸತತ 2ನೇ ವಿಶ್ವಕಪ್ ಗೆದ್ದುಕೊಂಡಿತು
ವಾಸ್ತವವಾಗಿ ಕಳೆದ ಬಾರಿ ನಡೆದಿದ್ದ 19 ವರ್ಷದೊಳಗಿನವರ ಟಿ20 ವಿಶ್ವಕಪ್ನಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಆಡಿದ್ದರು. ಆದರೆ ಆ ವಿಶ್ವಕಪ್ನಲ್ಲಿ ಶೆಫಾಲಿ ವರ್ಮಾ ಮತ್ತು ರಿಚಾ ಘೋಷ್ ಮತ್ತು ಟೈಟಾಸ್ ಸಾಧು ಅವರಂತಹ ಸ್ಟಾರ್ ಆಟಗಾರರ ಆರ್ಭಟದಲ್ಲಿ ತ್ರಿಶಾ ಅವರ ಕೊಡುಗೆಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕಿರಲಿಲ್ಲ. ಆದಾಗ್ಯೂ ಚೊಚ್ಚಲ ಆವೃತ್ತಿಯ ಫೈನಲ್ ಪಂದ್ಯದಲ್ಲೂ ತ್ರಿಶಾ ಟೀಂ ಇಂಡಿಯಾ ಪರ ಗರಿಷ್ಠ 24 ರನ್ ಗಳಿಸಿದ್ದರು. ಇದೀಗ ಎರಡು ವರ್ಷಗಳ ನಂತರವೂ ತಮ್ಮ ಆಟ ಬದಲಿಸದ ತ್ರಿಶಾ, ಎರಡನೇ ಆವೃತ್ತಿಯ ಫೈನಲ್ನಲ್ಲಿಯೂ ಗರಿಷ್ಠ 44 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!