ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿ.ಎಂ. ಸಿದ್ದರಾಮಯ್ಯ.

ಬೆಂಗಳೂರು :- ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು.ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು. ಸುಪ್ತ ಪ್ರತಿಭೆ ಹೊರಗೆ ತರುವ ಶಿಕ್ಷಣದಿಂದ ಯುವ ಸಮೂಹ ಸ್ವಾಭಿಮಾನಿಗಳಾಗಿ ಬೆಳೆಯಲು ಸಾಧ್ಯ ಎಂದರು.

ನಮ್ಮ ರಾಜ್ಯದಲ್ಲಿ ಮತ್ತು ತೆಲಂಗಾಣ, ಆಂಧ್ರದಲ್ಲಿ ಮಾತ್ರ SCP-TSP ಕಾಯ್ದೆ ಜಾರಿಯಲ್ಲಿದೆ. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವ ಬಿಜೆಪಿ ಅವರ ಆಡಳಿತದ ರಾಜ್ಯಗಳಲ್ಲಿಈ ಕಾಯ್ದೆ ತಂದೇ ಇಲ್ಲ ಏಕೆ ? ಬರೀ ಭಾಷಣ ಮಾಡಿದರೆ ಸಾಕಾ, ಅದು ಕ್ರಿಯೆಯಲ್ಲಿ ಕಾಣಬಾರದಾ ಎಂದು ಪ್ರಶ್ನಿಸಿದರು. ನಾವು ಜಾರಿ ಮಾಡಿರುವ ಐದೂ ಗ್ಯಾರಂಟಿಗಳೂ ಜನರ ಕೈಯಲ್ಲಿ ಹಣ ಇರಬೇಕು, ಕೊಳ್ಳುವ ಶಕ್ತಿ ಹೆಚ್ಚಾಗಬೇಕು ಎನ್ನುವ ನಮ್ಮ ಉದ್ದೇಶವನ್ನು ಯಶಸ್ವಿಯಾಗಿ ಈಡೇರಿಸಿದೆ ಎಂದರು.

ಜಾತಿ ಸೃಷ್ಟಿಸಿದವರು ನಾವಲ್ಲ. ಆದರೆ ಈ ಜಾತಿಯ ಅಸಮಾನತೆಗೆ ಬಲಿ ಆಗಿರುವವರು ನಾವು. ಜಾತಿ ಇರುವ ವರೆಗೂ ಸಮಾನ ಅವಕಾಶಗಳು ಸಿಗುವುದಿಲ್ಲ. ಏಕೆಂದರೆ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ ಎಂದರು. ಬಾಬು ಜಗಜೀವನ್ ರಾಮ್ ಅವರು ಕೇಂದ್ರ ಸಚಿವರಾಗಿ ಹಸಿರು ಕ್ರಾಂತಿ ಮಾಡಿ ಎಲ್ಲರಿಗೂ ಆಹಾರ ಸಿಗುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಮಗೆಲ್ಲಾ ಹಬ್ಬದ ದಿನ ಮಾತ್ರ ಅನ್ನ ಸಿಗುತ್ತಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ ಅನ್ನ ಭಾಗ್ಯ ಜಾರಿ ಮಾಡಿದೆ ಎಂದು ವಿವರಿಸಿದರು.

ಹೀಗಾಗಿ ಮಹಾನ್ ಚೇತನ ಬಾಬು ಜಗಜೀವನ್ ರಾಮ್ ಅವರ ಕಾಳಜಿಗಳನ್ನು ಸ್ಮರಿಸಬೇಕು. ಅವರು ಹಾಕಿಕೊಟ್ಟರುವ ಹೆಜ್ಜೆ ಗುರುತುಗಳನ್ನು ಪಾಲಿಸಬೇಕು ಎಂದರು. ಜಗಜೀವನ್ ರಾಮ್ ಮತ್ತು ಅಂಬೇಡ್ಕರ್ ಇಬ್ಬರಿಗೂ ಸಮಾಜದ ಕಷ್ಟ ಗೊತ್ತಿತ್ತು. ಈ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಮಾರ್ಗವಾಗಿ ಸಂವಿಧಾನ ಬಂತು, ನಮಗೆಲ್ಲಾ ಶಿಕ್ಷಣ ಸಿಕ್ಕಿತು ಎಂದರು.
ಮತ್ತೊಬ್ಬ ಅಂಬೇಡ್ಕರ್, ಜಗ ಜೀವನ್ ರಾಮ್ ನಮಗೆ ಸಿಗುವುದಿಲ್ಲ. ಹೀಗಾಗಿ ಇವರು ಬಿಟ್ಟು ಹೋಗಿರುವ ಚಿಂತನೆ ಮತ್ತು ಕಾಳಜಿಗಳನ್ನು ಪಾಲಿಸಬೇಕು ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!