ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದಲ್ಲಿ ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ಟೀಂ ಇಂಡಿಯಾ.!

ಕೌಲಾಲಂಪುರ :- ಐಸಿಸಿ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 9 ವಿಕೆಟ್ಗಳಿಂದ ಮಣಿಸಿದ ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ ಭಾರತ ತಂಡ, ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆ ಮೂಲಕ ಅಂಡರ್-19 ಟಿ20 ವಿಶ್ವ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಭಾನುವಾರ ಇಲ್ಲಿನ ಬೇಯು ಮಾಸ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್ಗಳಲ್ಲಿ 82 ರನ್ ಗಳಿಸಿ ಸರ್ವಪತನ ಕಂಡಿತು.

ದಕ್ಷಿಣ ಆಫ್ರಿಕಾ ನೀಡಿದ 83 ರನ್ಗಳ ಅಲ್ಪ ಗುರಿ ಬೆನ್ನಟ್ಟಿದ ಭಾರತ 11.2 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಗುರಿ ತಲುಪಿತು. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತ ಅಜೇಯ ತಂಡಗಳಾಗಿ ಫೈನಲ್ ಪ್ರವೇಶಿಸಿದ್ದವು. ಅಂತಿಮ ಹಣಾಹಣಿ 1ur ಯಲ್ಲಿ ಮೊದಲು ಬ್ಯಾಟ್ ಮಾಡಿದದ.
ಆಫ್ರಿಕಾ ಆಟಗಾರರು ನಿರೀಕ್ಷೆಗೆ ತಕ್ಕ ಬ್ಯಾಟ್ ಬೀಸುವಲ್ಲಿ ವಿಫಲರಾಗಿ ಭಾರತೀ ಯರ ಬೌಲಿಂಗ್ ದಾಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ದಕ್ಷಿಣ ಆಫ್ರಿಕಾ ಪರ ಮೀಕೆ ವ್ಯಾನ್ ವೂರ್ಸ್ಟ್ 23, ಜೆಮ್ಮಾ ಬೋಥಾ 16, ಫೇ ಕೌಲಿಂಗ್ 15, ಕರಾಬೊ ಮೆಸೊ 10 ರನ್ ಗಳಿಸಿದ್ದು ಬಟ್ಟರೇ ಉಳಿದವರು ಎರಡಂಕಿ ಮೊತ್ತ ದಾಖಲಿಸಲು ಸಾಧ್ಯವಾಗದೇ ಪರದಾಡಿ ದರು. ಅಂತಿಮವಾಗಿ ಡಿಯಾರಾ ರಾಮ್ಲಕಾನ್ 3. ಕೈಲಾ ರೇನಕೆ 7 ರನ್ ಗಳಿಸಿದರು. ಭಾರತದ ಪರ ಗೊಂಗಡಿ ತ್ರಿಶಾ 3, ವೈಷ್ಣವಿ ಶರ್ಮಾ, ಆಯುಷಿ ಶುಕ್ರಾಮತ್ತು ಪಾರುಣಿಕ ಸಿಸೋಡಿಯಾ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಬ್ಬಮ್ ಶಕೀಲ್ 1 ವಿಕೆಟ್ ಕಬಳಿಸಿದರು.

ದಕ್ಷಿಣ ಆಫ್ರಿಕಾ ನೀಡಿದ ಸಾಧಾರಣ ಗುರಿ ಬೆನ್ನತ್ತಿದ ಭಾರತ, ತಂಡದ ಮೊತ್ತ 36 ರನ್ ಆಗಿದ್ದ ವೇಳೆ 8 ರನ್ ಗಳಿಸಿದ್ದ ಜಿ.ಕಮಲಿನಿ ಅವರ ವಿಕೆಟ್ ಕಳೆದು ಕೊಂಡು ಆರಂಭಿಕ ಆಘಾತ ಎದುರಿಸಿ ತು. ಬಳಿಕ 2ನೇ ವಿಕೆಟ್ಗೆ ಜೊತೆಯಾದ ಗೊಂಗಡಿ ತ್ರಿಶಾ ಮತ್ತು ಸಾನಿಕಾ ಚಲ್ಕೆ 48 ರನ್ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೊಂಗಡಿ ತ್ರಿಷಾ 44, ಸಾನಿಕಾ ಚಲೈ 26 ರನ್ ಗಳಿಸಿ ಅಜೇಯ ರಾಗುಳಿದರು. ದಕ್ಷಿಣ ಆಫ್ರಿಕಾ ಪರ ಕೈಲಾ ರೇನಕೆ ಒಂದು ವಿಕೆಟ್ ಕಬಳಿಸಿದರು. ಪಂದ್ಯ ಹಾಗೂ ಸರಣಿಯಲ್ಲಿ
ಅತ್ಯುತ್ತಮ ಪ್ರದರ್ಶನ ನೀಡಿದ ತ್ರಿಶಾ ಪಂದ್ಯಶ್ರೇಷ್ಠ ಹಾಗೂ
ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಮಾನವೀಯತೆ ಮೆರೆದ ಶಾಸಕ ಅನಿಲ್ ಚಿಕ್ಕಮಾದು2023ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತೀಯ ಮಹಿಳಾ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇಂಗ್ಲೆಂಡ್ ತಂಡ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಭಾರತ ತಂಡವನ್ನು ಕರ್ನಾಟಕದ ನಿಕಿ ಪ್ರಸಾದ್ ಮುನ್ನಡೆಸಿದ್ದು, ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 19 ವರ್ಷದೊಳಗಿನ ಮಹಿಳಾ ಏಷ್ಯಾಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದ ನಿಕಿ 18 ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 41 ರನ್ ಗಳಿಂದ ಮಣಿಸಿ ತಂಡವನ್ನು ಚಾಂಪಿ ಯನ್ ಪಟ್ಟಕ್ಕೇರಿಸಿದ್ದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!