ಕನ್ನಡ ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಸ್ಪಷ್ಟ ಪಡಿಸಿದ ಕಿಚ್ಚ ಸುದೀಪ್.

ಕಿಚ್ಚ ಸುದೀಪ್ ಅವರು 11 ಸೀಸನ್ಗಳ ಕಾಲ ಬಿಗ್ ಬಾಸ್ ಕನ್ನಡವನ್ನು ನಿರೂಪಿಸಿದ ನಂತರ ಕಾರ್ಯಕ್ರಮದಿಂದ ನಿರ್ಗಮಿಸುತ್ತಿದ್ದಾರೆ ಎಂದು ಘೋಷಿಸಿದ್ದಾರೆ. ಇದು ಅವರ ಅಂತಿಮ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಲರ್ಸ್ ಕನ್ನಡದವರು ಅವರ ರಾಜೀನಾಮೆಯನ್ನು ಒಪ್ಪಿಕೊಂಡಿಲ್ಲವಾದರೂ, ಸುದೀಪ್ ಅವರು ತಮ್ಮ ನಿರ್ಧಾರದಲ್ಲಿ ದೃಢವಾಗಿದ್ದಾರೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ದ ಹೋಸ್ಟ್ ಆಗಿ 11 ಸೀಸನ್ಗಳನ್ನು ನಡೆಸಿಕೊಟ್ಟಿದ್ದಾರೆ. ಇದು ಅವರ ಕೊನೆಯ ಸೀಸನ್ ಎಂದು ಈ ಮೊದಲು ಹೇಳಿದ್ದರು. ಸಂದರ್ಶನ ಒಂದರಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್ ಅವರು, ‘ಕಲರ್ಸ್ ಕನ್ನಡದವರು ನನ್ನ ರೆಸಿಗ್ನೇಶನ್ ಲೆಟರ್ನ ಸ್ವೀಕರಿಸಿಲ್ಲ’ ಎಂದಿದ್ದರು. ಈಗ ಅವರು ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ್ದಾರೆ. ಈ ಮೂಲಕ ಅವರು ಗಟ್ಟಿ ನಿರ್ಧಾರವನ್ನು ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಸುದೀಪ್ ಅವರು, ‘ಮುಂದೆ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಅಥವಾ ಯಾರು ನಡೆಸಿಕೊಡಬೇಕು ಎಂದು ನಾನು ಹೇಳುವುದಿಲ್ಲ. ಕಲರ್ಸ್ನವರು ನಾನು ಬಿಡುವುದನ್ನು ಒಪ್ಪುತ್ತಿಲ್ಲ. ಮುಂದೆ ಮತ್ತೆ ನಾನೇ ಹೋಸ್ಟ್ ಮಾಡಬೇಕು ಎಂದು ಬಂದರೆ ಈ ಮೊದಲು ಟ್ವೀಟ್ ಮಾಡಿದ್ದೆ ಎಂದೆಲ್ಲ ಹಿಂಜರಿಯುವುದಿಲ್ಲ’ ಎಂದು ಹೇಳಿದ್ದರು.
ಆದರೆ, ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ಬಗ್ಗೆ ಗಟ್ಟಿ ನಿರ್ಧಾರ ಮಾಡಿದಂತೆ ಕಾಣುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬಿಗ್ ಬಾಸ್ನ ಕಳೆದ 11 ಸೀಸನ್ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿದ ಎಲ್ಲಾ ಪ್ರೀತಿಗಾಗಿ ನಿಮ್ಮೆಲ್ಲರಿಗೂ ಧನ್ಯವಾದಗಳು. ಮುಂಬರುವ ಫಿನಾಲೆ, ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್. ನಿಮ್ಮನ್ನು ಒಳ್ಳೆಯ ರೀತಿಯಲ್ಲಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದೊಂದು ಅವಿಸ್ಮರಣೀಯ ಪಯಣ. ಅದನ್ನು ನನ್ನ ಕೈಲಾದಷ್ಟು ನಿಭಾಯಿಸಿದ್ದಕ್ಕೆ ನನಗೆ ಖುಷಿ ಇದೆ. ಈ ಅವಕಾಶಕ್ಕಾಗಿ ಕಲರ್ಸ್ ಕನ್ನಡಕ್ಕೆ ಧನ್ಯವಾದ’ಎಂದಿದ್ದಾರೆ.
‘ಬಿಗ್ ಬಾಸ್ ಸೀಸನ್ 11’ ಆರಂಭ ಆಗಿ ಕೆಲವೇ ವಾರಗಳಲ್ಲಿ ಸುದೀಪ್ ಟ್ವೀಟ್ ಮಾಡಿದ್ದರು. ಈಗ ಸುದೀಪ್ ಅವರು ಮತ್ತೊಮ್ಮೆ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ವಿಚಾರವನ್ನು ಮತ್ತೊಮ್ಮೆ ಖಚಿತಪಡಿಸಿದ್ದಾರೆ. ಅವರು ಬಿಗ್ ಬಾಸ್ ತೊರೆಯೋದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!