ಕರ್ತವ್ಯ ನಿರತ ಪೊಲೀಸರೊಂದಿಗೆ ಅನುಚಿತ ವರ್ತನೆ, ಇಬ್ಬರ ವಿರುದ್ದ FIR ದಾಖಲು.

ಕರ್ತವ್ಯನಿರತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ FIR ದಾಖಲಾಗಿದೆ.

ನಿನ್ನೆ ತಡರಾತ್ರಿ ವೇಳೆ ಮರಿಸ್ವಾಮಿ ಹಾಗೂ ಮತ್ತೊಬ್ಬ ವ್ಯಕ್ತಿ ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಹೋಟೆಲ್ ಒಂದರ ಬಳಿ ಸ್ಕೂಟರ್ ಜೊತೆ ನಿಂತಿದ್ದಾರೆ.ಸ್ಕೂಟರ್ ಗೆ ನಂಬರ್ ಪ್ಲೇಟ್ ಹಾಕಿರಲಿಲ್ಲ.ಈ ಬಗ್ಗೆ ರಾತ್ರಿ ಗಸ್ತಿನಲ್ಲಿದ್ದ ವಿವಿಪುರಂ ಠಾಣೆಯ ಪೇದೆಗಳಾದ ರೆಹಮಾನ್ ಮತ್ತು ಕೌಶಿಕ್ ರವರು ಪ್ರಶ್ನಿಸಿದ್ದಾರೆ.ಪೊಲೀಸರ ಪ್ರಶ್ನೆಗೆ ಕೆರಳಿದ ಮರಿಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಳ್ಳುವಾಗ ಕಿತ್ತುಕೊಳ್ಳಲು ಬಂದಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿ ಬರುತ್ತಿದ್ದಾರೆ ಇಲ್ಲೇ ಇರುವಂತೆ ತಾಕೀತು ಮಾಡುತ್ತಿದ್ದರೂ ಓಡಿಹೋಗುವ ಪ್ರಯತ್ನ ಮಾಡಿದ್ದಾರೆ.ಕೊನೆಗೆ ಪೊಲೀಸರು ಚೇಸ್ ಮಾಡಿ ಮರಿಸ್ವಾಮಿಯನ್ನ ಹಿಡಿದಿದ್ದಾರೆ.ಯಾವ ಪೊಲೀಸ್ ಏನು ಮಾಡಲು ಸಾಧ್ಯವಿಲ್ಲ ಎಂದು ಮರಿಸ್ವಾಮಿ ಧಂಕಿ ಹಾಕಿರುವುದಾಗಿ ಸಿಬ್ಬಂದಿಗಳು ಆರೋಪಿಸಿದ್ದಾರೆ.ಈ ಸಂಭಂಧ ಮರಿಸ್ವಾಮಿ ಹಾಗೂ ಮತ್ತೊಬ್ಬನ ವಿರುದ್ದ ಸಿಬ್ಬಂದಿಗಳಾದ ರೆಹಮಾನ್ ಹಾಗೂ ಕೌಶಿಕ್ ರವರು ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!