ಕರ್ನಾಟಕ ಬುಲ್ಡೋಜರ್ಸ್ ತಂಡ ಸೇರಿಕೊಂಡ ಬಾಹುಬಲಿ!

ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಕ್ಕೆ ಮೈಸೂರು ಆತಿಥ್ಯ ನೀಡುತ್ತಿರುವ ಕಾರಣ ಅರಮನೆ ನಗರಿಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಅದರಲ್ಲೂ ಕಿಚ್ಚ ಸುದೀಪ್ (Kiccha Sudeep) ನಾಯಕತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಕೂಡ ನಿರೀಕ್ಷೆಯಂತೆ ಸೆಮಿಫೈನಲ್ ತಲುಪಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಇದೀಗ ಟೂರ್ನಿಯ ಸೆಮಿಫೈನಲ್ ಪಂದ್ಯ ಮಾರ್ಚ್ 1 ರಂದು ನಡೆಯಲಿದೆ. ಈ ದಿನದಂದು ನಾಲ್ಕು ತಂಡಗಳು ಫೈನಲ್ಗೆ ಟಿಕೆಟ್ ಪಡೆಯಲು ಸೆಣಸಾಟ ನಡೆಸಲಿವೆ. ಮೊದಲ ಸೆಮಿಫೈನಲ್ನಲ್ಲಿ ಬೆಂಗಾಲ್ ಟೈಗರ್ಸ್ ಹಾಗೂ ಪಂಜಾಬ್ ದಿ ಶೇರ್ ಮುಖಾಮುಖಿಯಾದರೆ, ಎರಡನೇ ಸೆಮಿಫೈನಲ್ನಲ್ಲಿ ರ್ನಾಟಕ ಬುಲ್ಡೋಜರ್ಸ್ ಹಾಗೂ ತಮಿಳ್ ರೈನೋಸ್ ಎದುರುಬದುರಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಕರ್ನಾಟಕ ತಂಡಕ್ಕೆ ಸಂತಸದ ಸುದ್ದಿಯೊಂದು ಸಿಕ್ಕಿದೆ.
ವಾಸ್ತವವಾಗಿ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಟೂರ್ನಿಯ ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು 1 ಪಂದ್ಯದಲ್ಲಿ ಸೋಲು ಕಾಣಬೇಕಾಯಿತು. ಹೀಗಾಗಿ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿರುವ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ನಲ್ಲಿ ಮೂರನೇ ಸ್ಥಾನ ಪಡೆದಿರುವ ತಮಿಳ್ ರೈನೋಸ್ ತಂಡವನ್ನು ಎದುರಿಸಲಿದೆ.

ಕರ್ನಾಟಕ ತಂಡಕ್ಕೆ ಬಚ್ಚನ್ ಎಂಟ್ರಿ
ಇನ್ನು ತಂಡದ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ.. ಟೂರ್ನಿಯೂದ್ದಕ್ಕೂ ಕರ್ನಾಟಕ ತಂಡಕ್ಕೆ ಡಾರ್ಲಿಂಗ್ ಕೃಷ್ಣ ಹಾಗೂ ರಾಜೀವ್ ಹನು ತಂಡದ ಬ್ಯಾಟಿಂಗ್ ಜೀವಾಳವಾಗಿದ್ದರು. ಈ ಇಬ್ಬರನ್ನು ಬಿಟ್ಟರೆ ಕರಣ್ ಆರ್ಯನ್ ಮಾತ್ರ ಹೇಳಿಕೊಳ್ಳುವಂತಹ ಕೆಲವು ಇನ್ನಿಂಗ್ಸ್ ಆಡಿದ್ದರು. ಹೀಗಾಗಿ ಕರ್ನಾಟಕ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಕೊಂಚ ದುರ್ಬಲವಾಗಿದೆ ಎಂದು ತೊರುತ್ತಿತ್ತು. ಇದಕ್ಕೆ ಕಾರಣ ತಂಡದ ಆರಂಭಿಕ ಆಟಗಾರ ಪ್ರದೀಪ್ ಈ ಬಾರಿಯ ಸಿಸಿಎಲ್ನಿಂದ ಹಿಂದೆ ಸರಿದಿದ್ದು, ಪ್ರದೀಪ್ ಅಲಭ್ಯತೆ ತಂಡಕ್ಕೆ ಇದುವರೆಗೆ ಕಾಡಿಲ್ಲವಾದರೂ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳಿಗೆ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಬೇಕಿತ್ತು. ಇದೀಗ ಅದಕ್ಕೆ ಪೂರಕವಾಗಿ ಕರ್ನಾಟಕ ತಂಡಕ್ಕೆ ಸ್ಫೋಟಕ ಬ್ಯಾಟರ್ನ ಆಗಮನವಾಗಿದೆ. ಹೊಡಿಬಡಿ ದಾಂಡಿಗ ಅರುಣ್ ಬಚ್ಚನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಂಡಿರುವುದು ಕಿಚ್ಚನ ಪಡೆಯ ಆತ್ಮಸ್ಥೈರ್ಯವನ್ನು ಇನ್ನಷ್ಟು ಹೆಚ್ಚಿಸಿದೆ.
ಹನುಮಂತು ಡೈಲಾಗ್ ಗೆ ಫ್ಯಾನ್ಸ್ ಫುಲ್ ಫಿದಾ..!
ಸಿಸಿಎಲ್ನಲ್ಲಿ ಕರ್ನಾಟಕದ ಪ್ರದರ್ಶನ
ಇಲ್ಲಿಯವರೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ 10 ಆವೃತ್ತಿಗಳು ನಡೆದಿವೆ. ಈ 10 ಆವೃತ್ತಿಗಳಲ್ಲಿ ಅತ್ಯಂತ ಯಶಸ್ವಿ ತಂಡವೆಂದರೆ ತೆಲುಗು ವಾರಿಯರ್ಸ್. ಈ ತಂಡ ಇದುವರೆಗೆ 4 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡವಿದೆ. ಇದುವರೆಗೆ ಈ ಲೀಗ್ನಲ್ಲಿ ಕರ್ನಾಟಕ 2 ಬಾರಿ ಚಾಂಪಿಯನ್ ಆಗಿದೆ. ಅಚ್ಚರಿಯ ಸಂಗತಿಯೆಂದರೆ ಇದುವರೆಗೆ ನಡೆದಿರುವ 10 ಆವೃತ್ತಿಗಳಲ್ಲಿ ಕರ್ನಾಟಕ ತಂಡ 7 ಬಾರಿ ಫೈನಲ್ಗೇರಿದೆ. ಆದರೆ 2 ಬಾರಿ ಮಾತ್ರ ಚಾಂಪಿಯನ್ ಕಿರೀಟ ತೊಟ್ಟಿದ್ದು, ಉಳಿದಂತೆ 5 ಬಾರಿ ರನ್ನರ್ ಅಪ್ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಕಳೆದ ಬಾರಿಯೂ ಕರ್ನಾಟಕ ಫೈನಲ್ ತಲುಪಿತ್ತು. ಆದರೆ ಫೈನಲ್ ಹಣಾಹಣಿಯಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಮುಗ್ಗರಿಸಿತ್ತು. ಇದೀಗ ಕರ್ನಾಟಕ ತಂಡ ಮತ್ತೊಮ್ಮೆ ಫೈನಲ್ಗೇರಿ ಟ್ರೊಫಿ ಎತ್ತಿಹಿಡಿಯಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!