ಕಾಂಗ್ರೆಸ್ ಸಂಸದ ಹಾಗೂ ಶಾಸಕರ ಮನೆಗಳ ಮೇಲೆ ಇಡಿ ದಾಳಿ:

ಕಾಂಗ್ರೆಸ್ ಸಂಸದ, ಶಾಸಕರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳ ದಾಳಿಯಿಂದ ಕೆಲದಿನಗಳಿಂದ ತಣ್ಣಗಿದ್ದ ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಮತ್ತೆ ಸದ್ದು ಮಾಡಿದೆ. ಹಗರಣದ ಹಣವನ್ನು ಲೋಕಸಭಾ ಚುನಾವಣೆಗೆ ಬಳಕೆ ಆರೋಪ ಹಿನ್ನಲೆ ದಾಳಿ ಮಾಡಲಾಗಿದೆ. ಸದ್ಯ ಈ ದಾಳಿ ವಿಚಾರವಾಗಿ ರಾಜಕೀಯ ನಾಯಕರು ಕಿಡಿಕಾರಿದ್ದಾರೆ. ಯಾರೆಲ್ಲಾ ಏನಂದ್ರು ಇಲ್ಲಿದೆ ಮಾಹಿತಿ.ಇ.ಡಿ ಅಧಿಕಾರಿಗಳ ಡ್ರೀಲ್ಗೆ ಸಂಸದರು, ಶಾಸಕರು ಕಂಗಾಲಾಗಿದ್ದಾರೆ. ದಾಳಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದಾರೆ.

ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದ ಸಿಎಂ
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಯಾರೇ ಆಗಲಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇಡಿ ಜಪ್ತಿ ಮಾಡಿದ್ದ ಹಣ ಎಲ್ಲಿ ಹೋಯಿತು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಯಾವ ಕಾರಣಕ್ಕೆ ದಾಳಿಯಾಗಿದೆ ಅನ್ನೋದು ಇಡಿಯವರಿಗೆ ಗೊತ್ತು. ಇಡಿ ಅಧಿಕಾರಿಗಳ ದಾಳಿ ಇದೇನು ಹೊಸದಲ್ಲ. ಚುನಾವಣೆ ಸಮಯದಲ್ಲಿ ಎಲ್ಲಾ ಪಕ್ಷಗಳ ಹಣ ಸೀಜ್ ಮಾಡಿದ್ದರು. ಇಡಿ ಜಪ್ತಿ ಮಾಡಿದ್ದ ಹಣ ಎಲ್ಲಿ ಹೋಯಿತು, ಯಾರಿಗೂ ಗೊತ್ತಿಲ್ಲ ಎಂದಿದ್ದಾರೆ.

ಇವೆಲ್ಲಾ ಪೂರ್ವ ನಿಯೋಜಿತ ದಾಳಿಗಳು: ಬಸವರಾಜ ರಾಯರೆಡ್ಡಿ
ದೆಹಲಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿದ್ದು, ಕೇಂದ್ರದಲ್ಲಿರುವ ಮೋದಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಬರೀ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಇಡಿ, ಐಡಿ ದಾಳಿ ಆಗುತ್ತಿದೆ. ಇವೆಲ್ಲಾ ಪೂರ್ವ ನಿಯೋಜಿತ ದಾಳಿಗಳು, ಇಡಿ ದಾಳಿ ಸರಿಯಲ್ಲ. ಕಾಂಗ್ರೆಸ್ ನಾಯಕರನ್ನು ಕುಗ್ಗಿಸಲು ದಾಳಿಗಳನ್ನು ಮಾಡಲಾಗುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಬಗ್ಗೆ ತನಿಖೆ ಆಗಲಿ, ಆದರೆ ಇಡಿಗೂ ವಾಲ್ಮೀಕಿ ನಿಗಮದ ಕೇಸ್ಗೂ ಏನು ಸಂಬಂಧ ಎಂದಿದ್ದಾರೆ.

ಹಗರಣದ ಬಗ್ಗೆ ಸದನದಲ್ಲೇ ಸಿಎಂ ಒಪ್ಪಿಕೊಂಡಿದ್ರು: ಡಾ.ಅಶ್ವತ್ಥ್ ನಾರಾಯಣ
ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗನಿಂದಲೂ ಹಗಲು ದರೋಡೆ ಮಾಡುತ್ತಿದ್ದಾರೆ. ರಾಜ್ಯದ ಜನರ ಜೇಬಿನಿಂದ ಹಣ ಲೂಟಿ ಮಾಡುತ್ತಿದ್ದಾರೆ. ಚಂದ್ರಶೇಖರ್ ಆತ್ಮಹತ್ಯೆ ಬಳಿಕ ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂತು. ಸರ್ಕಾರ ಯಾರ ಮೇಲೂ ಕ್ರಮಕೈಗೊಳ್ಳದೆ ಭಂಡತನ ತೋರಿದೆ. ಬಳ್ಳಾರಿ ಚುನಾವಣೆಗೆ ಹಣ ಬಳಸಿದ್ದಾರೆಂದು ತನಿಖೆಯಲ್ಲಿ ಗೊತ್ತಾಗಿದೆ. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲೇ ಸಿಎಂ ಒಪ್ಪಿಕೊಂಡಿದ್ದರು ಎಂದು ಹೇಳಿದ್ದಾರೆ.

ಬಿ. ಶ್ರೀರಾಮುಲು ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸಂಸದರು, ಶಾಸಕರ ಮನೆಗಳ ಮೇಲೆ ಇಡಿ ದಾಳಿ ಮಾಡಿದೆ. ಈ ನಾಯಕರು ಬಹಳ ಸಾಚಾಗಳ ತರಹ ಮಾತಾಡುತ್ತಿದ್ದರು. ಇವರು ಮಾಡುವುದೆಲ್ಲಾ ಅನಾಚಾರ, ಮನೆ ಮುಂದೆ ಬೃಂದಾವನ. ನಾವು ನಾಗೇಂದ್ರ ರಾಜೀನಾಮೆಗೆ ಒತ್ತಾಯ ಮಾಡಿದ್ದೆವು. ಬಳಿಕ ರಾಜೀನಾಮೆ ನೀಡಿ ಜೈಲು ಪಾಲಾದರು ಎಂದಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!