ಕಿಚ್ಚನಿಗೆ ಪ್ರಶಸ್ತಿ ಎಂದರೆ ಅಲರ್ಜಿ, ರಾಜ್ಯ ಸರ್ಕಾರದ ಪ್ರಶಸ್ತಿ ನನಗೆ ಬೇಡಾ ಎಂದ ಸುದೀಪ್..!

ಸ್ಯಾಂಡಲ್‌ವುಡ್ ಬಾದ್ ಷಾ ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಮೊದಲು ಕೂಡಾ ತುಮಕೂರು ಯುನಿವರ್ಸಿಟಿ ನೀಡಿದ ಡಾಕ್ಟರೇಟ್ ಪದವಿ ನಾ ಕೂಡ ಕಿಚ್ಚ ಸುದೀಪ್ ಅವರು ತಿರಸ್ಕರಿಸಿದ್ದರು. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸುದೀಪ್, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಷಮೆ ಕೋರಿದ್ದಾರೆ.

2019ನೇ ಸಾಲಿನ ಚಲನಚಿತ್ರ ಪ್ರಶಸ್ತಿಯನ್ನು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ‘ಪೈಲ್ವಾನ್’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಅವರನ್ನ ಆಯ್ಕೆ ಮಾಡಲಾಗಿತ್ತು. ಅತ್ಯುತ್ತಮ ನಟ ಪ್ರಶಸ್ತಿಯನ್ನು ಸುಬ್ಬಯ್ಯ ನಾಯ್ಡು ಅವರ ಹೆಸರಿನಲ್ಲಿ ಸರ್ಕಾರ ನೀಡುತ್ತಿತ್ತು.
ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ಕಿಚ್ಚ ಸುದೀಪ್ ಅವರು ನಿರಾಕರಿಸಿದ್ದಾರೆ. ನನ್ನನ್ನು ಆಯ್ಕೆ ಮಾಡಿದ ತೀರ್ಪುಗಾರರಿಗೆ ಧನ್ಯವಾದಗಳು. ನಾನು ಪ್ರಶಸ್ತಿಗಳನ್ನು ಪಡೆಯೋದು ಬಿಟ್ಟು ತುಂಬಾ ವರ್ಷಗಳಾಗಿದೆ. ನನಗಿಂತ ಉತ್ತಮ ಕಲಾವಿದರು ತುಂಬಾ ಜನ ಇದ್ದಾರೆ. ಅವರಿಗೆ ಈ ಪ್ರಶಸ್ತಿ ಸಿಕ್ಕರೆ ಅದೇ ನನಗೆ ತುಂಬಾ ಖುಷಿಯ ವಿಚಾರ. ಈ ಪ್ರಶಸ್ತಿಯನ್ನು ವಿನಮ್ರವಾಗಿ ತಿರಸ್ಕಾರ ಮಾಡಿದ್ದೇನೆಂದು ಸುದೀಪ್ ತಿಳಿಸಿದ್ದಾರೆ.

Related Posts

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಅಗತ್ಯ ವಸ್ತುಗಳು ಹಾಗೂ ಇಂಧನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಂದು ಆರ್ಥಿಕ ಹೊರೆ ನೀಡಿದೆ. ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (PUCC) ಪಡೆಯಲು ಪಾವತಿಸಬೇಕಾದ ಶುಲ್ಕವನ್ನು ಸಾರಿಗೆ ಇಲಾಖೆಯು ಪರಿಷ್ಕರಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ…

You Missed

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ವಾಹನ ಸವಾರರಿಗೆ ಬಿತ್ತು ಬೆಲೆ ಏರಿಕೆ ಬಿಸಿ: ಕರ್ನಾಟಕದಲ್ಲಿ PUC ಮಾಲಿನ್ಯ ತಪಾಸಣೆ ದರ ಹೆಚ್ಚಳ!

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಭಾರತದಲ್ಲಿ ಮೊಬೈಲ್ ಸಂಖ್ಯೆಗಳು 10 ಅಂಕಿಗಳೇ ಏಕೆ ಇರುತ್ತವೆ? ಇದರ ಹಿಂದಿನ ಗಣಿತದ ಲೆಕ್ಕಾಚಾರವೇನು?

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !