ಕೌನ್ ಬನೇಗಾ ಕರೋಡ್ಪತಿಯಲ್ಲಿ ಬಾಗಲಕೋಟೆಯ ಬಡ ಯುವಕ 50 ಲಕ್ಷ ಗೆದ್ದ..!

ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ. ಸಾಮಾನ್ಯ ಜ್ಞಾನದ ಪ್ರಶ್ನೆಗಳನ್ನು ಕೇಳಿ ಯಾರು ಹೆಚ್ಚು ಉತ್ತರ ನೀಡುತ್ತಾರೊ ಅವರಿಗೆ ಬಹುಮಾನವಾಗಿ ಲಕ್ಷಾಂತರ ಹಣ ನೀಡಲಾಗುತ್ತದೆ. ಈ ಶೋನಲ್ಲಿ ಭಾಗವಹಿಸಿದ್ದ ಬಾಗಲಕೋಟೆಯ ಬಡ ಯುವಕ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾರೆ.
ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೇ ಕರ್ನಾಟಕದ ಬಾಗಲಕೋಟೆಯವನು.
ಬಾಗಲಕೋಟೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್ಜಾನ್ ಮಲಿಕ್ ಬಾಬ್ ಫೀರಜಾದೆ, ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಬಲು ಜನಪ್ರಿಯ ಟಿವಿ ಶೋ ಕೌನ್ ಬನೇಗಾ ಕರೋಡ್ಪತಿಯಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ಕೊನೆಯ ಹಂತದ ವರೆಗೆ ಏರಿದ ಅವರು ಒಂದರ ಮೇಲೊಂದು ಪ್ರಶ್ನೆಗಳಿಗೆ ಉತ್ತರ ನೀಡುತ್ತಾ, 50 ಲಕ್ಷ ರೂಪಾಯಿ ಗೆದ್ದು ಬಂದಿದ್ದಾರೆ.
ಯುವಕ ರಮ್ಜಾನ್ ಮಲ್ಲಿಕ್ ಅವರ ತಂದೆ ಮಹಾಲಿಂಗಪುರದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಾರೆ. ರಮ್ಜಾನ್ ಸಹ ತಂದೆಗೆ ಸಹಾಯ ಮಾಡುತ್ತಿದ್ದರು. ಬಡ ಕುಟುಂಬವಾದ್ದರಿಂದ ಕುಟುಂಬಕ್ಕೆ ಸಹಾಯ ಮಾಡಲು ಚಹಾ ಅಂಗಡಿಯಲ್ಲಿ ಲೊಟ ತೊಳೆಯುವ ಕೆಲಸ. ಬ್ಯಾಡ್ಮಿಂಟನ್ ಕೋರ್ಟ್ನ ವಾಚ್ಮ್ಯಾನ್ ಹೀಗೆ ಹಲವು ರೀತಿಯ ಚಿಕ್ಕ ಪುಟ್ಟ ಕೆಲಸ ಮಾಡುತ್ತಾ ಬಿಎ ಮುಗಿಸಿದ್ದಾರೆ. ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಹೀಗಿರುವಾಗ ಕೌನ್ ಬನೇಗಾ ಕರೋಡ್ಪತಿಗೆ ಅರ್ಜಿ ಹಾಕಿದ್ದ ರಮ್ಜಾನ್ಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರಕಿದೆ.
ಈ ಅವಕಾಶವನ್ನು ಸದುಪಯೋಗ ಪಡೆಸಿಕೊಂಡಿರುವ ರಮ್ಜಾನ್, ರಿಯಾಲಿಟಿ ಶೋನಲ್ಲಿ ಅದ್ಭುತವಾಗಿ ಆಡಿ, ಅಮಿತಾಬ್ ಬಚ್ಚನ್ ಕೇಳಿದ ಬಹುತೇಕ ಎಲ್ಲ ಪ್ರಶ್ನೆಗಳಿಗೂ ಸರಿ ಉತ್ತರ ನೀಡಿ 50 ಲಕ್ಷ ರೂಪಾಯಿ ಬಹುಮಾನ ಗೆದ್ದಿದ್ದಾರೆ. ಅಸಲಿಗೆ ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ್ದರೆ ಒಂದು ಕೋಟಿ ರೂಪಾಯಿ ಹಣ ಸಿಕ್ಕಿರುತ್ತಿತ್ತು. ಆದರೆ ಆ ಪ್ರಶ್ನೆಯ ಉತ್ತರದ ಮೇಲೆ ಅನುಮಾನ ಇದ್ದ ಕಾರಣ ರಮ್ಜಾನ್ ಅವರು ಆಟದಿಂದ ನಿವೃತ್ತಿ ಹೊಂದಿ 50 ಲಕ್ಷ ರೂಪಾಯಿ ಹಣವನ್ನು ಗೆದ್ದು ಬೀಗಿದ್ದಾರೆ.
ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಗೆದ್ದು ಬಂದ ರಮ್ಜಾನ್ ಅವರನ್ನು ಊರ ಜನ ಅದ್ಧೂರಿಯಾಗಿ ಸ್ವಾಗತ ಮಾಡಿದ್ದಾರೆ. ಹಾರ ತುರಾಯಿ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿದ್ದಾರೆ. ರಮ್ಜಾನ್, ಕೌನ್ ಬನೇಗಾ ಕರೋಡ್ಪತಿಯಲ್ಲಿ ಗೆದ್ದು ‘ಸ್ಲಂ ಡಾಗ್ ಮಿಲೇನಿಯರ್’ ಕತೆಯನ್ನು ನಿಜ ಮಾಡಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!